AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಧಾರಾಕಾರ ಮಳೆಗೆ ನದಿ, ಕೆರೆಗಳು ಭರ್ತಿ, ಅಪಾಯದ ಅಂಚಿನಲ್ಲಿ ಕೆರೆ ತೊಣ್ಣೂರು ಕೆರೆ

ರಾಜ್ಯದ ವಿವಿಧ ಕಡೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ, ಕೆರೆ, ಹಳ್ಳ- ಕೊಳ್ಳಗಳು ಭರ್ತಿಗೊಳ್ಳುತ್ತಿದ್ದು, ಕೆಲವೆಡೆ ಕೆರೆ ಕೋಡಿ ಹೊಡೆದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ.

Karnataka Rain: ಧಾರಾಕಾರ ಮಳೆಗೆ ನದಿ, ಕೆರೆಗಳು ಭರ್ತಿ, ಅಪಾಯದ ಅಂಚಿನಲ್ಲಿ ಕೆರೆ ತೊಣ್ಣೂರು ಕೆರೆ
ಮಳೆಗೆ ಭರ್ತಿಗೊಂಡ ಕೆರೆಗಳು
TV9 Web
| Edited By: |

Updated on: Oct 14, 2022 | 2:51 PM

Share

ತುಮಕೂರು: ರಾಜ್ಯದ ವಿವಿಧ ಕಡೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ, ಕೆರೆ, ಹಳ್ಳ- ಕೊಳ್ಳಗಳು ಭರ್ತಿಗೊಳ್ಳುತ್ತಿದ್ದು, ಕೆಲವೆಡೆ ಕೆರೆ ಕೋಡಿ ಹೊಡೆದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಸದ್ಯ ತುಮಕೂರು, ಮಂಡ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಸುರಿದ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೊಂದೆಡೆ ತುಮಕೂರಿನಲ್ಲಿ ಕೆರೆ ತುಂಬಿ ರಸ್ತೆಗೆ ಬಂದ ನೀರಿನಲ್ಲಿ ಮೀನುಗಳು ಕೂಡ ಕೊಚ್ಚಿ ಬಂದಿವೆ. ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿರುವ ಮಾರನಕಟ್ಟೆ ಕೆರೆ ಸತತವಾಗಿ ಸುರಿದ ಮಳೆಯಿಂದಾಗಿ ತುಂಬಿ ನೀರು ರಸ್ತೆಗೆ ಬಂದಿದೆ. ಇದರೊಂದಿಗೆ ಕೆರೆಯಲ್ಲಿದ್ದ ಮೀನುಗಳು ಕೂಡ ರಸ್ತೆಗೆ ಬಂದಿವೆ. ಹಿಗಾಗಿ ಜನರು ಮೀನಿಗಾಗಿ ಮುಗಿಬಿದ್ದಿದ್ದು, ದೃಶ್ಯಾವಳಿಗಳನ್ನು ಮೊಬೈಲ್ ಕ್ಯಾಮಾರಾದಲ್ಲಿ ಸೆರೆಹಿಡಿಯಲಾಗಿದೆ.

ಇನ್ನೊಂದೆಡೆ, ತುಮಕೂರಿನ ಮಧುಗಿರಿ ತಾಲ್ಲೂಕಿನ ಚನ್ನಸಾಗರ ಗ್ರಾಮಕ್ಕೆ ಮುಳುಗಡೆ ಭೀತಿ ಎದುರಾಗಿದೆ. ಈ ಹಿಂದೆ ಎರಡು ಬಾರಿಯ ಮಳೆಗೆ ಸಂಪೂರ್ಣ ಮುಳುಗಡೆಯಾಗಿದ್ದ ಗ್ರಾಮದಲ್ಲಿ ಇದೀಗ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಪರಿಣಾಮವಾಗಿ ಜಯಮಂಗಲಿ ನದಿ ನೀರು ತುಂಬಿ ಹರಿಯುತ್ತಿದೆ. ಹೀಗಾಗಿ ಗ್ರಾಮ ಮುಳುಗಡೆಯಾಗುವ ಭೀತಿ ಎದುರಾದ ಹಿನ್ನೆಲೆ ಕೆಲವರು ಗ್ರಾಮ ತೊರೆಯಲು ಮುಂದಾಗಿದ್ದಾರೆ. ಅಲ್ಲದೆ ಗ್ರಾಮಸ್ಥರನ್ನು ಬೇರೆ ಕಡೆಗಳಿಗೆ ಸ್ಥಳಾಂತರಿಸಲು ಕಂದಾಯ ಅಧಿಕಾರಿಗಳು, ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಜಮೀನುಗಳಿಗೆ ನುಗ್ಗಿದ ಹಳ್ಳದ ನೀರು

ರಾಮನಗರ: ತಡರಾತ್ರಿ ಮಾಗಡಿ‌ ತಾಲೂಕಿನಾದ್ಯಂತ ಬಾರಿ ಮಳೆ ಹಿನ್ನೆಲೆ ಕೂಟಗಲ್, ಶ್ಯಾನಭೋಗನಹಳ್ಳಿ, ಎರೇಹಳ್ಳಿ ಗ್ರಾಮಗಳ ಜಮೀನುಗಳಿಗೆ ಹಳ್ಳದ ನೀರು ನುಗ್ಗಿದೆ. ಪರಿಣಾಮವಾಗಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶಗೊಂಡಿದ್ದು, ಬಾಳೆ, ತೆಂಗು, ಸೀಮೆ ಹುಲ್ಲು ಬೆಳೆಗಳು ಸಂಪೂರ್ಣ ನಾಶಗೊಂಡಿವೆ.

ಅಪಾಯದ ಅಂಚಿನಲ್ಲಿ ಕೆರೆ ತೊಣ್ಣೂರು ಕೆರೆ

ಮಂಡ್ಯ: ತಡ ರಾತ್ರಿ ಸುರಿದ ಭಾರೀ ಮಳೆಗೆ ತೊಣ್ಣೂರು ಕೆರೆ ಕೋಡಿ ಬಿದ್ದಿದ್ದು, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿರುವ ನೀರನ್ನ ಕಂಡು ಜನರು ಭಯಭೀತರಾಗಿದ್ದಾರೆ. ತೊಣ್ಣೂರು ಕೆರೆ 20 ವರ್ಷಗಳ ಬಳಿಕ ಕೋಡಿ ಹೊಡೆದಿರುವ ಪರಿಣಾಮ 100 ಎಕರೆಯಷ್ಟು ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಕಬ್ಬು ಬತ್ತ ಬೆಳೆಗಳಿಗೆ ಹಾನಿಯಾಗಿವೆ. ಮುಂಜಾಗ್ರತಾ ಕ್ರಮವಾಗಿ ಕೆರೆಗೆ ಹೋಗುವ ಮಾರ್ಗವನ್ನ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ