AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಜುಲೈ 14ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ, ಶಾಲೆಗಳಿಗೆ ರಜೆ; ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ

Mangalore Rain: ಕರ್ನಾಟಕದಲ್ಲಿ ಜೂನ್ ಆರಂಭದಿಂದ ಇದುವರೆಗೂ ಮಳೆಯಿಂದ 12 ಜನರು ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಜುಲೈ 14ರವರೆಗೆ ಮಳೆ ಮುಂದುವರೆಯಲಿದೆ.

Karnataka Rain: ಜುಲೈ 14ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ, ಶಾಲೆಗಳಿಗೆ ರಜೆ; ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಮಳೆ
TV9 Web
| Edited By: |

Updated on:Jul 11, 2022 | 8:29 AM

Share

Monsoon 2022: ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ರಾಜ್ಯಾದ್ಯಂತ ಜುಲೈ 14ರವರೆಗೆ ಮಳೆ (Heavy Rainfall) ಮುಂದುವರೆಯಲಿದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಜುಲೈ 13ರವರೆಗೆ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ಮಲೆನಾಡು ಭಾಗದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಜೂನ್ ಆರಂಭದಿಂದ ಇದುವರೆಗೂ ಮಳೆಯಿಂದ 12 ಜನರು ಮೃತಪಟ್ಟಿದ್ದಾರೆ. ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರಿನಲ್ಲಿ 44 ಮನೆಗಳು ನೆಲಸಮವಾಗಿದೆ. ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆ ಘಾಟ್​​ನಲ್ಲಿ ಕೂಡ ಗುಡ್ಡ ಕುಸಿತವಾಗಿದೆ. ಕೊಡಗಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತವಾಗಿದ್ದು, 50 ಮನೆಗಳಿಗೆ ಹಾನಿಯಾಗಿದೆ.

ಇಂದು ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಎಂದು. ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರಲ್ಲಿ ಮಳೆ ನಿಲ್ಲದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳವರೆಗೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
Karnataka Dams Water Level: ಬಹುತೇಕ ಭರ್ತಿಗೊಂಡ ಕೆಆರ್​ಎಸ್, ರಾಜ್ಯದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ
Image
Karnataka Rain Highlight : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ; ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
Image
ಕೊಡಗಿನಲ್ಲಿ ಇಂದೂ ಕೂಡಾ ಶಾಲಾ -ಕಾಲೇಜುಗಳಿಗೆ ರಜೆ; ಉಡುಪಿಯಲ್ಲಿ ಭಾರಿ ಮಳೆಯ ಎಚ್ಚರಿಕೆ

ಇದನ್ನೂ ಓದಿ: Karnataka Rain: ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಇಲ್ಲಿವರೆಗೆ 44 ಮನೆಗಳು ನೆಲಸಮ; ಮಳೆ ವಿವರ ಹೀಗಿದೆ

ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಲ್ಪೆಯಲ್ಲಿ ಬಲೆ ಹಾಕಲಾಗಿದೆ. ಮಲೆನಾಡು ಭಾಗ ಹಾಗೂ ಬಯಲು ಸೀಮೆ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕು, ಮೂಡಿಗೆರೆ, ಕಳಸ, ಎನ್.ಆರ್ ಪುರ, ಕೊಪ್ಪ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇನ್ನೆರಡು ದಿನ ರಜೆ ಘೋಷಿಸಲಾಗಿದೆ.

ಕರಾವಳಿ ಜತೆಗೆ ಮಲೆನಾಡಿನ ನಾಲ್ಕು ಜಿಲ್ಲೆಗಳ ಪೈಕಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಜು.12ರವರೆಗೆ ಧಾರಾಕಾರವಾಗಿ ಮಳೆ ಸುರಿಯಲಿದ್ದು, ಮಲೆನಾಡಿನಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಜುಲೈ 14ರವರೆಗೆ ಹಾಸನ ಸೇರಿದಂತೆ ಈ ಎಲ್ಲ ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ ನೀಡಲಾಗಿದೆ.

ಇದನ್ನೂ ಓದಿ: Karnataka Rain Live Updates: ಕರ್ನಾಟಕದಾದ್ಯಂತ ಮುಂದುವರಿದ ಮಳೆಯ ಆರ್ಭಟ: ಚಳಿಗಾಳಿಗೆ ಹೊರಗೆ ಬಾರದ ಜನ

ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ. ಈ ಭಾಗದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ಜೋರು ಮಳೆ ಸುರಿಯಲಿದೆ. ಹೀಗಾಗಿ, ಈ ಇಷ್ಟು ಜಿಲ್ಲೆಗಳಿಗೆ ಹಳದಿ ಅಲರ್ಟ್’ ನೀಡಲಾಗಿದೆ. ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಅಬ್ಬರಿಸಲಿದ್ದು, ಇಂದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ.

Published On - 8:26 am, Mon, 11 July 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ