Karnataka Rain: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಮದುವರೆದಿದ್ದು ಆದರೆ ವರುಣದೇವ ಇನ್ನೂ ಕೃಪೆ ತೋರಿಲ್ಲ.

Karnataka Rain: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Hindustan Times
Follow us
| Updated By: Digi Tech Desk

Updated on:Apr 19, 2024 | 4:29 PM

ಗುರುವಾರದಿಂದಲೇ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ(Rain) ಶುರುವಾಗಿದೆ. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್​ನ ಭಾಲ್ಕಿಯಲ್ಲಿ ಕೂಡ ಗುರುವಾರ ಮಳೆಯಾಗಿದೆ.

ಏಪ್ರಿಲ್ 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ಹಲವೆಡೆ ಭಾರೀ ಮಳೆ; ಶಿವಮೊಗ್ಗದಲ್ಲಿ ಮರ ಬಿದ್ದು ಓರ್ವ ಸಾವು

ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:30 am, Fri, 19 April 24

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು