Karnataka Rains: ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಜೂನ್ 20 ರಿಂದ ಭಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ(Rain) ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ(Rain) ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.
ಕುಮಟಾ, ಮಡಿಕೇರಿ, ಭಾಗಮಂಡಲ, ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪಣಂಬೂರು, ಮುಲ್ಕಿ, ಬೆಳ್ತಂಗಡಿ, ಕುಂದಾಪುರ, ಕಾರ್ಕಳ, ಕೋಟ, ಸಿದ್ದಾಪುರ, ಮಂಕಿ, ಅಂಕೋಲಾ, ಗೇರುಸೊಪ್ಪದಲ್ಲಿ ಮಳೆಯಾಗಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 19ರವರೆಗೂ ಮಳೆ
ಬಿಪೋರ್ಜಾಯ್ ಚಂಡಮಾರುತ 125 ಕಿ.ಮೀ ವೇಗದಲ್ಲಿ ಗುಜರಾತ್ ಕರಾವಳಿಗೆ ಅಪ್ಪಳಿಸಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಪ್ರಬಲ ಚಂಡಮಾರುತ ಅಪ್ಪಳಿಸಿದ ನಂತರ ರಾಜ್ಯದ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.
ಗುಜರಾತ್ ನ ಕರಾವಳಿ ಭಾಗದ ಎಂಟು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದ್ದು, ಇದು ಮಧ್ಯರಾತ್ರಿಯವರೆಗೂ ಹೆಚ್ಚು ಸಕ್ರಿಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದಾಗಿ ಸುಮಾರು 22 ಜನರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಪ್ರಾಣಹಾನಿ ಕುರಿತು ವರದಿಯಾಗಿಲ್ಲ. ಇನ್ನು 23 ಪ್ರಾಣಿಗಳು ಸಾವನ್ನಪ್ಪಿವೆ. 524 ಮರಗಳು ದರೆಗುರುಳಿದ್ದು ಕೆಲವೆಡೆ ವಿದ್ಯುತ್ ಕಂಬಗಳು ಸಹ ಬಿದ್ದಿವೆ. ಇದರಿಂದಾಗಿ 940 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ