AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆ
ಮಳೆImage Credit source: Neeraj Sharma- Twitter
ನಯನಾ ರಾಜೀವ್
|

Updated on: Jun 20, 2023 | 7:29 AM

Share

ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕಾರವಾರ, ಚನ್ನರಾಯಪಟ್ಟಣ, ಹೊನ್ನಾವರ, ಶಿರಾಲಿ, ಮಂಕಿ, ಗೋಕರ್ಣ, ಕೋಟ, ಮಾಗಡಿ, ಮನಿರಾಬಾದ್, ಸಿರಾ, ಅಗ್ರಹಾರ, ಬೆಳ್ಳೂರು, ಕೂಡ್ಲಿಗಿ, ಹೆಬ್ಬೂರು, ಬೇಲಿಕೇರಿ, ಕುಮಟಾ, ಉಪ್ಪಿನಂಗಡಿ, ಮುಲ್ಕಿ, ಸಿದ್ದಾಪುರ, ಉಡುಪಿ, ಗಂಗಾವತಿ, ಯಲಬುರ್ಗಾ, ಇಂಡಿ, ಚನ್ನಗಿರಿ, ಹೊಸಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಹಲವೆಡೆ ಭಾರೀ ಮಳೆ, ಬಾಗಲಕೋಟೆಯಲ್ಲಿ ಮಳೆಗಾಗಿ ಕತ್ತೆಗಳಿಗೆ ಮದುವೆ

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ತುಂತುರು ಮಳೆ ಶುರುವಾಗಿದೆ.

ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಭಾನುವಾರ ರಾತ್ರಿ ಚೆನ್ನೈನಾದ್ಯಂತ ವ್ಯಾಪಕ ಮಳೆ ದಾಖಲಾಗಿದೆ. ಮೀನಂಬಾಕ್ಕಂನಲ್ಲಿ ಭಾನುವಾರ ಬೆಳಗ್ಗೆ 8.30 ರಿಂದ ಸೋಮವಾರ ಬೆಳಗ್ಗೆ 5.30 ರವರೆಗೆ 137.6 ಮಿಮೀ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಇದು ಕಳೆದ 27 ವರ್ಷದ ನಂತರ ಜೂನ್‌ ನಲ್ಲಿ ಆಗಿರುವ ಅತ್ಯಧಿಕ ಮಳೆ. 1996 ರಲ್ಲಿ ಜೂನ್‌ನಲ್ಲಿ 282.2 ಮಿಲಿಮೀಟರ್‌ ಮಳೆಯಾಗಿತ್ತು.

ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಣ್ಣಾಮಲೈ, ಕಲ್ಲಕುರಿಚಿ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವಾರೂರ್, ತಂಜಾವೂರು, ತಿರುಚ್ಚಿ, ಅರಿಯಲೂರ್, ಪೆರಂಬಲೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ಗುರುವಾರದವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ