ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಕಾರವಾರ, ಚನ್ನರಾಯಪಟ್ಟಣ, ಹೊನ್ನಾವರ, ಶಿರಾಲಿ, ಮಂಕಿ, ಗೋಕರ್ಣ, ಕೋಟ, ಮಾಗಡಿ, ಮನಿರಾಬಾದ್, ಸಿರಾ, ಅಗ್ರಹಾರ, ಬೆಳ್ಳೂರು, ಕೂಡ್ಲಿಗಿ, ಹೆಬ್ಬೂರು, ಬೇಲಿಕೇರಿ, ಕುಮಟಾ, ಉಪ್ಪಿನಂಗಡಿ, ಮುಲ್ಕಿ, ಸಿದ್ದಾಪುರ, ಉಡುಪಿ, ಗಂಗಾವತಿ, ಯಲಬುರ್ಗಾ, ಇಂಡಿ, ಚನ್ನಗಿರಿ, ಹೊಸಪೇಟೆಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕದ ಹಲವೆಡೆ ಭಾರೀ ಮಳೆ, ಬಾಗಲಕೋಟೆಯಲ್ಲಿ ಮಳೆಗಾಗಿ ಕತ್ತೆಗಳಿಗೆ ಮದುವೆ
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ತುಂತುರು ಮಳೆ ಶುರುವಾಗಿದೆ.
ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಭಾನುವಾರ ರಾತ್ರಿ ಚೆನ್ನೈನಾದ್ಯಂತ ವ್ಯಾಪಕ ಮಳೆ ದಾಖಲಾಗಿದೆ. ಮೀನಂಬಾಕ್ಕಂನಲ್ಲಿ ಭಾನುವಾರ ಬೆಳಗ್ಗೆ 8.30 ರಿಂದ ಸೋಮವಾರ ಬೆಳಗ್ಗೆ 5.30 ರವರೆಗೆ 137.6 ಮಿಮೀ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಇದು ಕಳೆದ 27 ವರ್ಷದ ನಂತರ ಜೂನ್ ನಲ್ಲಿ ಆಗಿರುವ ಅತ್ಯಧಿಕ ಮಳೆ. 1996 ರಲ್ಲಿ ಜೂನ್‌ನಲ್ಲಿ 282.2 ಮಿಲಿಮೀಟರ್ ಮಳೆಯಾಗಿತ್ತು.
ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಣ್ಣಾಮಲೈ, ಕಲ್ಲಕುರಿಚಿ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವಾರೂರ್, ತಂಜಾವೂರು, ತಿರುಚ್ಚಿ, ಅರಿಯಲೂರ್, ಪೆರಂಬಲೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ಗುರುವಾರದವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ