Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಳೆದ ಒಂದು ವಾರದ ಹಿಂದೆ ಶಿವಮೊಗ್ಗ, ಶೃಂಗೇರಿ, ತೀರ್ಥಹಳ್ಳಿ, ಉತ್ತರ ಕನ್ನಡದ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಅದಾದ ಬಳಿಕ ಜನರು, ರೈತರು ಮಳೆಯನ್ನೇ ಕಾದು ಕುಳಿತಿದಿದ್ದಾರೆ. ಇದೀಗ ಹವಾಮಾನ ಇಲಾಖೆಯ ಈ ಭರವಸೆ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮೋಡImage Credit source: The Economic Times
Follow us
ನಯನಾ ರಾಜೀವ್
| Updated By: Digi Tech Desk

Updated on:Apr 19, 2024 | 4:29 PM

ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್(Yellow Alert)​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಬೇಸಿಗೆಯ ಮಳೆಯ ಅಬ್ಬರಕ್ಕೆ ಚಿಕ್ಕೋಡಿ ಜನತೆ ಫುಲ್ ಖುಷ್

ಚಿಕ್ಕಮಗಳೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Thu, 18 April 24