Karnataka Weather: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜೋರು ಮಳೆ, ಕರ್ನಾಟಕದ 10 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಬೆಂಗಳೂರು ಸೇರಿ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಮಗಳೂರು ನಗರ, ಕೋಲಾರ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Karnataka Weather: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜೋರು ಮಳೆ, ಕರ್ನಾಟಕದ 10 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
ಮಳೆ
Image Credit source: PTI

Updated on: Jan 19, 2025 | 7:56 AM

ಬೆಂಗಳೂರಿನಲ್ಲಿ ಇಂದು(ಭಾನುವಾರ) ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ನಾಳೆಯವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ದಲ್ಲಿ ಕೂಡ ಮಳೆಯಾಗಲಿದೆ.

ತುಮಕೂರು, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಮಳೆ ಹಾಗೂ ಮೋಡಕವಿದ ವಾತಾವರಣದ ಕಾರಣ ರಾಜ್ಯಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದೆ.

ಬೀದರ್​ನಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ ವೃತ್ತ, ಟೌನ್​ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:
ಚಂಡಮಾರುತ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us