ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಇಂದು ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us
ವಿವೇಕ ಬಿರಾದಾರ
|

Updated on: Sep 20, 2023 | 7:48 AM

ರಾಜ್ಯದಾದ್ಯಂತ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ (Indian Meteorological Department) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು (ಸೆ.20) ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಕೂಡ ಇಂದು ಗುಡು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 82 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಇಂದು ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಉತ್ತರ ಒಳನಾಡು ಜಿಲ್ಲೆಗಳಲ್ಲೂ ಕೂಡ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಆದರೆ ಇಂದು ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಬರಲಿದ್ದರೇ, ರಾಯಚೂರು ಮತ್ತು ಯಾದಗಿರಿಯಲ್ಲಿ ಒಣಹವೆ ಇರಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30-40 ಕಿಮೀ ಇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್