Karnataka Weather: ರಾಜ್ಯದಲ್ಲಿ ಮುಂಗಾರು ದುರ್ಬಲ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Karnataka Rain Forecast: ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿಯ ಕೆಲವೆಡೆ ಮಳೆಯಾಗಿದೆ. ಆಗಸ್ಟ್ 24ರವರೆಗೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ರಾಜ್ಯದಲ್ಲಿ ಮುಂಗಾರು ದುರ್ಬಲ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
ಮಳೆ
Image Credit source: Hindustan Times

Updated on: Aug 18, 2023 | 7:34 AM

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿಯ ಕೆಲವೆಡೆ ಮಳೆಯಾಗಿದೆ. ಆಗಸ್ಟ್ 24ರವರೆಗೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಮಂಗಳೂರು ವಿಮಾನ ನಿಲ್ದಾಣ, ಬಸವನ ಬಾಗೇವಾಡಿ, ತಾಳಿಕೋಟೆ, ನಿಪ್ಪಾಣಿ, ಕಾರವಾರ, ಗೋಕರ್ಣ, ವಿಜಯಪುರ, ಚಿಕ್ಕೋಡಿ, ಸಂಕೇಶ್ವರದಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಇಂದು ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ತೆಲಂಗಾಣದಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಕೋಮಾರಂಭೀಮ್, ಮಂಚೇರಿಯಲ್, ಜೈಶಂಕರ್ ಭೂಪಾಲಪಲ್ಲಿ, ಮುಳುಗು, ವಾರಂಗಲ್ ಮತ್ತು ಪೆದಪಲ್ಲಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ನೈಋತ್ಯ ಮುಂಗಾರಿನಿಂದ ಮಹಾರಾಷ್ಟ್ರದಲ್ಲೂ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.

Published On - 7:32 am, Fri, 18 August 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us