AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

Karnataka Rain: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ
ಮಳೆImage Credit source: Mint
ನಯನಾ ರಾಜೀವ್
|

Updated on: Mar 30, 2023 | 7:44 AM

Share

ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ 2 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕನಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕಲಬುರಗಿಯಲ್ಲಿ 38.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮಧ್ಯಪ್ರದೇಶದಿಂದ ತಮಿಳುನಾಡಿ (Tamil Nadu) ನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ