Karnataka Rain: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

|

Updated on: Mar 30, 2023 | 7:44 AM

ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

Karnataka Rain: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ
ಮಳೆ
Image Credit source: Mint
Follow us on

ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ 2 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕನಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕಲಬುರಗಿಯಲ್ಲಿ 38.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮಧ್ಯಪ್ರದೇಶದಿಂದ ತಮಿಳುನಾಡಿ (Tamil Nadu) ನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ