Karnataka Rain: ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
Image Credit source: Hindustan Times

Updated on: Apr 11, 2023 | 7:28 AM

ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆಯಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ. ಎಚ್​​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ, ಉಳಿದೆಡೆ ಒಣಹವೆ ಮುಂದುವರಿಕೆ

ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ಹೇಳಿದೆ. ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ಸೋಮವಾರ, ಮುಂಬರುವ ಮಾನ್ಸೂನ್ ನಲ್ಲಿ ಸಾಮಾನ್ಯ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಲಿದ್ದು, ಶೇ. 94 ರಷ್ಟು ಮಳೆಯಾಗಲಿದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ದೀರ್ಘಾವಧಿಯಲ್ಲಿ ದೀರ್ಘಾವಧಿಯ ಸರಾಸರಿ (ಎಲ್‌ಪಿಎ) 868.6 ಮಿಮೀ ಮಳೆಯಾಗಲಿದೆ ಎಂದು ಹೇಳಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us