Karnataka Rain Today: ಬೆಂಗಳೂರು, ಕೊಡಗು, ಕರಾವಳಿ ಸೇರಿ ಹಲವೆಡೆ ಇಂದು ಗುಡುಗು ಸಹಿತ ಮಳೆ

Bengaluru Rain: ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ

Karnataka Rain Today: ಬೆಂಗಳೂರು, ಕೊಡಗು, ಕರಾವಳಿ ಸೇರಿ ಹಲವೆಡೆ ಇಂದು ಗುಡುಗು ಸಹಿತ ಮಳೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 19, 2022 | 5:50 AM

Karnataka Weather Today: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಮಾ.19) ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ಇಂದು ಮತ್ತು ನಾಳೆ ಬೆಂಗಳೂರು ನಗರ (Bengaluru Rain), ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮಾ.20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಮಾ.20 ಮತ್ತು ಮಾ.21ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಉಡುಪಿ, ಕೊಡಗು, ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯಾಗಿದೆ. ಕೊಡಗಿನ ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಭಾಗಮಂಡಲ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ್ದರಿಂದ ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 20 ಮತ್ತು 21ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂಊರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ಉಂಟಾಗಲಿದೆ. ಮಾರ್ಚ್ 21ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆಯಿದ್ದರೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಚದುರಿದ ಹಿಮ ಸಹಿತ ಮಳೆಯಾಗಲಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲೆ ಮಳೆಯಾಗಲಿದೆ. ಪಂಜಾಬ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲೂ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದು ಗುಡುಗು ಸಹಿತ ಮಳೆ

Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇಂದು ತುಂತುರು ಮಳೆ; ಕೇರಳ, ತಮಿಳುನಾಡಿನಲ್ಲಿ ವರುಣನ ಆರ್ಭಟ