Karnataka Weather Today: ಭಾರತದಲ್ಲಿ ಅಸಾನಿ ಚಂಡಮಾರುತ (Cyclone Asani) ಅಪ್ಪಳಿಸಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ನೆರೆಯ ತಮಿಳುನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅಕಾಲಿಕವಾಗಿ ಮಳೆಯಾಗುತ್ತಿದೆ. ಶುಕ್ರವಾರ ಸುರಿದ ಮಳೆಗೆ ಹಾವೇರಿ ಜಿಲ್ಲೆಯ ರವಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರ ನಡುವೆ ನಿನ್ನೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇಂದು ಕೂಡ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಮಾ.20) ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ (Rainfall) ಸಾಧ್ಯತೆ ಇದೆ.
ಶನಿವಾರ ಉತ್ತರ ಕನ್ನಡದಲ್ಲಿ ಮಳೆರಾಯ ಅಬ್ಬರಿಸಿದ್ದು, ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯಲ್ಲಿ ಸೇರಿದ್ದ ಜನರು, ವ್ಯಾಪಾರಿಗಳು ಕಂಗಾಲಾಗುವಂತಾಯಿತು. ಅಲ್ಲದೆ, ಜಾತ್ರೆಯಲ್ಲಿ ಹಾಕಲಾಗಿದ್ದ ಜಾಯಿಂಟ್ ವೀಲ್ ಕೂಡ ಕೆಳಗೆ ಬಿದ್ದಿತ್ತು. ಚಿಕ್ಕಮಗಳೂರಿನ ಕಳಸ, ಮೂಡಿಗೆರೆ, ಶೃಂಗೇರಿ, ಎನ್ಆರ್ ಪುರ, ಕೊಪ್ಪದಲ್ಲಿ ಭಾರೀ ಮಳೆಯಾಗಿದೆ. ಅನೇಕ ಕಡೆ ವಿದ್ಯುತ್ ಕಂಬಗಳು, ರಸ್ತೆಗಳು ಕುಸಿದಿವೆ. ಕಳಸದಲ್ಲಿ ಮರ ಬಿದ್ದು ಮೆನಯೇ ಕುಸಿದು ಬಿದ್ದಿದೆ. ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ ನಗರ ಸೇರಿದಂತೆ ಕೆಲವೆಡೆ ಶನಿವಾರ ಮಳೆಯಾಗಿದೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಇಂದು (ಮಾರ್ಚ್ 20) ಮತ್ತು ಮಾರ್ಚ್ 21ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡು, ಕರ್ನಾಟಕದ ಕೆಲವೆಡೆ ಮಳೆ ಹೆಚ್ಚಾಗಿದ್ದು, ನಾಳೆಯಿಂದ ಇನ್ನಷ್ಟು ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 22 ರ ಅವಧಿಯಲ್ಲಿ ರಾಯಲಸೀಮಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಾರ್ಚ್ 21ರಿಂದ ಈಶಾನ್ಯ ಭಾರತದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Cyclone Asani: ಅಸಾನಿ ಚಂಡಮಾರುತದ ಅಬ್ಬರದಿಂದ ಸೋಮವಾರದವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆ
Karnataka Rain Today: ಬೆಂಗಳೂರು, ಕೊಡಗು, ಕರಾವಳಿ ಸೇರಿ ಹಲವೆಡೆ ಇಂದು ಗುಡುಗು ಸಹಿತ ಮಳೆ