Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
Karnataka Weather Today: ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದಿನಿಂದ ಏ. 10ರವರೆಗೆ ಮಳೆ ಮುಂದುವರೆಯಲಿದೆ.
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ. 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದಿನಿಂದ ಏ. 10ರವರೆಗೆ ಮಳೆ ಮುಂದುವರೆಯಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 10ರವರೆಗೂ ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗಲಿದೆ.
ಮುಂದಿನ 3 ದಿನಗಳ ಕಾಲ ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯಾಗಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಲಿದೆ.
ಇಂದು ಅರುಣಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಗುಜರಾತ್, ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಇರುತ್ತವೆ.
ಭಾರತದ ಇತರ ಭಾಗಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಹಿಮಾಚಲದ ಕೆಲವು ಭಾಗಗಳಲ್ಲಿ ಮತ್ತು ಪಂಜಾಬ್, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆಯಿದೆ. ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉಪ ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಒಡಿಶಾ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ವಿದರ್ಭ, ಛತ್ತೀಸ್‌ಗಢ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜಸ್ಥಾನ, ಗುಜರಾತ್, ಚಂಡೀಗಢ, ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಬಿಸಿಗಾಳಿ ಉಂಟಾಗಲಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ಕೊಡಗು, ಮೈಸೂರಿನಲ್ಲಿಂದು ಗುಡುಗು ಸಹಿತ ಮಳೆ
Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ಕೊಡಗು, ಮೈಸೂರಿನಲ್ಲಿಂದು ಗುಡುಗು ಸಹಿತ ಮಳೆ