Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇಂದಿನಿಂದ ಜೂನ್ 13ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೂ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಮಳೆ
Follow us
ಆಯೇಷಾ ಬಾನು
|

Updated on: Jun 08, 2024 | 7:50 AM

ಬೆಂಗಳೂರು, ಜೂನ್.08: ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Rain). ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲೆಿಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲೆಿಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮಳೆಯಿಂದಾಗಿ ಭಾರೀ ಅವಾಂತರ; ಮನೆ, ಠಾಣೆಗಳಿಗೆ ನುಗ್ಗಿದ ನೀರು, ಜಲ ಮೂಲಗಳಿಗೆ ಜೀವ ಕಳೆ

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ತುಂಬಾ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಹಾವೆೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 kmph) ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೆೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಸಲಾಗಿದೆ.

ಇನ್ನು ಮಿಂಚು ಮತ್ತು ಗುಡುಗು ಸಿಡಿಲಿನಿಂದ ಎಚ್ಚರ! ಈ ಸಾರ್ವಜನಿಕ ಜಾಗೃತಿ ವಿಡಿಯೋವನ್ನು ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ತಿಳಿಯಿರಿ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಟ್ವೀಟ್ ಮೂಲಕ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ