ಬೆಂಗಳೂರು ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ: ದಕ್ಷಿಣ ಕನ್ನಡಕ್ಕೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ (IMD) ವರದಿಯಂತೆ, ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ಬೆಂಗಳೂರು ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ: ದಕ್ಷಿಣ ಕನ್ನಡಕ್ಕೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ
ಮಳೆ

Updated on: Aug 01, 2026 | 7:34 PM

ಬೆಂಗಳೂರು, ಆ.1: ರಾಜ್ಯದ ದಕ್ಷಿಣ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ (Light to Moderate Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವರದಿಯ ಪ್ರಕಾರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಸೇರಿದಂತೆ ಒಟ್ಟು 13 ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ತಗ್ಗು ಪ್ರದೇಶಗಳು ಹಾಗೂ ಮಳೆ ಪೀಡಿತ ರಸ್ತೆಗಳಲ್ಲಿ ಸಂಚರಿಸುವಾಗ ವಾಹನ ಸವಾರರು ಜಾಗರೂಕರಾಗಿರಲು ಹಾಗೂ ವಿದ್ಯುತ್ ಕಂಬ, ಹಳೆಯ ಕಟ್ಟಡಗಳ ಬಳಿ ನಿಲ್ಲದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮಂಗಳೂರಿನ ಹಲವು ಭಾಗದಲ್ಲಿ ಭೂಕುಸಿತ ಕೂಡ ಆಗಿದೆ. ದಕ್ಷಿಣ ಕನ್ನಡದಲ್ಲಿ ಭಾರೀ ಗಾಳಿ ಮಳೆ ಇದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಭಾರಿ ಯಿಂದ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್‌ಐವಿ ಸೋಂಕು ವದಂತಿ ಸುಳ್ಳು: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದ್ದು, ಮಲೆನಾಡಿನ ಘಟ್ಟ ಪ್ರದೇಶಗಳು ಹಾಗೂ ಕರಾವಳಿಯ ನದಿ ತೀರದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದೆ. ನಿರಂತರ ಸಾಧಾರಣದಿಂದ ಭಾರಿ ಮಳೆ ಹಾಗೂ ಬಿರುಸಿನ ಗಾಳಿ ಬೀಸುವ ಸಾಧ್ಯತೆಯಿದೆ. ತಗ್ಗು ಪ್ರದೇಶದ ನಿವಾಸಿಗಳಿಗೆ ಹಾಗೂ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಆಡಳಿತ ಸೂಚಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us