AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain Updates: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
ನಯನಾ ರಾಜೀವ್
|

Updated on: Jan 26, 2023 | 6:00 AM

Share

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ. ಸುಂಟಿಕೊಪ್ಪ, ಕೊಪ್ಪ, ಮಡಿಕೇರಿ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ, ಗೋಣಿಕೊಪ್ಪಲು, ಕೆವಿಕೆ, ಮೈಸೂರು, ಚಿಕ್ಕಮಗಳೂರು, ಹರದನಹಳ್ಳಿ, ಹಾರಂಗಿ, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain Updates: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಮೈಸೂರಿನಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರುತ್ತದೆ, ಕೆಲವು ಕಡೆಗಳಲ್ಲಿ ಬೆಳಗಿನಜಾವ ದಟ್ಟಮಂಜು ಮುಸುಕುವ ಸಾಧ್ಯತೆ ಇದೆ, ಗರಿಷ್ಠ ಉಷ್ಣಾಂಶ 28 ಹಾಗೂ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶಮ 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್