ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ. ಸುಂಟಿಕೊಪ್ಪ, ಕೊಪ್ಪ, ಮಡಿಕೇರಿ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ, ಗೋಣಿಕೊಪ್ಪಲು, ಕೆವಿಕೆ, ಮೈಸೂರು, ಚಿಕ್ಕಮಗಳೂರು, ಹರದನಹಳ್ಳಿ, ಹಾರಂಗಿ, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rain Updates: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಮೈಸೂರಿನಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರುತ್ತದೆ, ಕೆಲವು ಕಡೆಗಳಲ್ಲಿ ಬೆಳಗಿನಜಾವ ದಟ್ಟಮಂಜು ಮುಸುಕುವ ಸಾಧ್ಯತೆ ಇದೆ, ಗರಿಷ್ಠ ಉಷ್ಣಾಂಶ 28 ಹಾಗೂ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶಮ 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ