Karnataka Rains: ಬೆಂಗಳೂರಿನಲ್ಲಿ ಅ.20ರವರೆಗೆ ಸುರಿಯಲಿದೆ ಭಾರಿ ಮಳೆ, ಆರೆಂಜ್​ ಅಲರ್ಟ್​

|

Updated on: Oct 14, 2024 | 7:57 AM

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಯೆಲ್ಲೋ , ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗಮ ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರಿನಲ್ಲಿ ಅ.20ರವರೆಗೆ ಸುರಿಯಲಿದೆ ಭಾರಿ ಮಳೆ, ಆರೆಂಜ್​ ಅಲರ್ಟ್​
ಮಳೆ
Image Credit source: PTI
Follow us on

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ.
ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.

ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೋಮವಾರ ಬೆಳಗಿನಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.19ರವರೆಗೆ ಮಳೆ

ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:57 am, Mon, 14 October 24