ದೆಹಲಿ: ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಮುಂಗಾರು ಮಳೆ. ಕರ್ನಾಟಕದ ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಕ್ಕೆ ಮುಂಗಾರು ಮಳೆ ಆಗಮಿಸಿದೆ. ಮುಂಗಾರು ಪ್ರವೇಶ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದ್ದು ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಶೇ.103ರಷ್ಟು ಮಳೆ ಆಗಲಿದೆ. ಈ ಮೊದಲು ಶೇ.99 ರಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಆದ್ರೆ ಈಗ ಶೇ.103 ರಷ್ಟು ಮಳೆ ಆಗುತ್ತೆ ಎಂದ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮತ್ತೊಂದು ಕಡೆ ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಶಾಂತಿನಗರ, ಮೆಜೆಸ್ಟಿಕ್, ಕೋರಮಂಗಲ, ಆಡುಗೋಡಿ, ಕಾರ್ಪೊರೇಷನ್, ಕೆ.ಆರ್.ಮಾರ್ಕೆಟ್, ಶಿವಾಜಿನಗರ, ವಿಧಾನಸೌಧ, ಸದಾಶಿವನಗರ ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ