Karnataka Rain Updates: ಜನವರಿ 25 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

Karnataka Rain Updates: ಜನವರಿ 25 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ
ಮಳೆ
Follow us
ನಯನಾ ರಾಜೀವ್
|

Updated on: Jan 25, 2023 | 6:00 AM

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಇನ್ನು 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ.

ಬಂಗಾಳಕೊಲ್ಲಿ ಉಪಸಾಗರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯದಲ್ಲಿ ಚಳಿಯ ಅಬ್ಬರ ಬಲು ಜೋರಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಮುಂದಿನ 24 ಗಂಟೆಗಳ ಕಾಲ ಬೆಳಿಗ್ಗೆ ಮಂಜು ಮುಸುಕಿದ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಓದಿ: ಮೈಸೂರು-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕಾಲಿಕ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರು ಎಚ್​ಎಎಲ್​ನಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಗರದ ನಂಜನಗೂಡು, ಹುಣಸೂರು ಭಾಗದಲ್ಲಿ ಅಕಾಲಿಕ ಮಳೆ ಆಗಿದೆ. ತುಂತುರು ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಇನ್ನು ಮಳೆಗಾಲ ಮುಗಿದರೂ ಈ ರೀತಿಯ ಅನೀರಿಕ್ಷಿತ ಮಳೆಗೆ ಸಾರ್ವಜನಿಕರು ಕಂಗಾಲಾಗಿದ್ದಾರೆ. ಅದರಲ್ಲೂ ವಾಹನ ಸವಾರರಂತೂ ಅಕಾಲಿಕ ಮಳೆಗೆ ಪರದಾಡುವಂತಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ