AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಫೆಬ್ರವರಿ 1 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.

Karnataka Rain Updates: ಫೆಬ್ರವರಿ 1 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಮಳೆ
ನಯನಾ ರಾಜೀವ್
|

Updated on: Jan 31, 2023 | 7:17 AM

Share

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.

ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೋಡಗಳು ಹಗಲಿನಲ್ಲಿ ಶಾಖವನ್ನು ಹಿಡಿದಿಟ್ಟುಕೊಳ್ಳುತ್ತವೆ. ರಾತ್ರಿಯ ತಾಪಮಾನವನ್ನು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆದಾಗ್ಯೂ, ಮೋಡ ಕವಿದ ವಾತಾವರಣವು ಸೂರ್ಯನಿಗೆ ಅಡ್ಡಿಯಾಗುವುದರಿಂದ ಹಗಲಿನ ತಾಪಮಾನವನ್ನು ಕಡಿಮೆ ಮಾಡುತ್ತದೆ.

ಮತ್ತಷ್ಟು ಓದಿ: India Rain Updates: ದೆಹಲಿಯಲ್ಲಿ ಮುಂದಿನ 12 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಹರ್ಯಾಣದ ಭಿವಾನಿ, ಉತ್ತರಪ್ರದೇಶದ ಕಿಥೋರ್, ಗುರ್ಮುಕ್ತೇಶ್ವರ್, ಹಾಪುರ್ ಮತ್ತು ಗುಲಾಟಿಯಲ್ಲಿ ಲಘು ಮಳೆಯಾಗಲಿದೆ. ಹರ್ಯಾಣದ ಜಿಂದ್, ಗೊಹಾನಾ, ಹಂಸಿ, ರೋಹ್ಟಕ್, ಚರ್ಖಿ ದಾದ್ರಿ, ಕೊಸಾಲಿ, ಉತ್ತರ ಪ್ರದೇಶದ ಬಿಜ್ನೌರ್, ಸಕೋಟಿ ತಾಂಡಾ, ಹಸ್ತಿನಾಪುರ, ಮೀರತ್, ಮೋದಿನಗರ ಮತ್ತು ರಾಜಸ್ಥಾನದ ಪಿಲಾನಿಯಲ್ಲಿ ತಡರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗಲಿದ್ದು, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರೋಹ್ಟಾಂಗ್ ಪಾಸ್, ಕುಂಜಮ್ ಪಾಸ್, ಬರಾಲಾಚಾ ಸೇರಿದಂತೆ ಇತರೆ ಬೆಟ್ಟಗಳಲ್ಲಿ ಭಾರಿ ಹಿಮಪಾತವಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಚಳಿ ಹೆಚ್ಚಾಗಿದೆ, ಸೋಮವಾರವೂ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಿಮಪಾತದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ದೆಹಲಿಯಲ್ಲಿ ಜನವರಿ 31 ರಂದು ಲಘು ಮಳೆಯಾಗಲಿದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ದೆಹಲಿ ಗರಿಷ್ಟ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್