ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೋಡಗಳು ಹಗಲಿನಲ್ಲಿ ಶಾಖವನ್ನು ಹಿಡಿದಿಟ್ಟುಕೊಳ್ಳುತ್ತವೆ. ರಾತ್ರಿಯ ತಾಪಮಾನವನ್ನು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆದಾಗ್ಯೂ, ಮೋಡ ಕವಿದ ವಾತಾವರಣವು ಸೂರ್ಯನಿಗೆ ಅಡ್ಡಿಯಾಗುವುದರಿಂದ ಹಗಲಿನ ತಾಪಮಾನವನ್ನು ಕಡಿಮೆ ಮಾಡುತ್ತದೆ.
ಮತ್ತಷ್ಟು ಓದಿ: India Rain Updates: ದೆಹಲಿಯಲ್ಲಿ ಮುಂದಿನ 12 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಹರ್ಯಾಣದ ಭಿವಾನಿ, ಉತ್ತರಪ್ರದೇಶದ ಕಿಥೋರ್, ಗುರ್ಮುಕ್ತೇಶ್ವರ್, ಹಾಪುರ್ ಮತ್ತು ಗುಲಾಟಿಯಲ್ಲಿ ಲಘು ಮಳೆಯಾಗಲಿದೆ. ಹರ್ಯಾಣದ ಜಿಂದ್, ಗೊಹಾನಾ, ಹಂಸಿ, ರೋಹ್ಟಕ್, ಚರ್ಖಿ ದಾದ್ರಿ, ಕೊಸಾಲಿ, ಉತ್ತರ ಪ್ರದೇಶದ ಬಿಜ್ನೌರ್, ಸಕೋಟಿ ತಾಂಡಾ, ಹಸ್ತಿನಾಪುರ, ಮೀರತ್, ಮೋದಿನಗರ ಮತ್ತು ರಾಜಸ್ಥಾನದ ಪಿಲಾನಿಯಲ್ಲಿ ತಡರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿಯಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗಲಿದ್ದು, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರೋಹ್ಟಾಂಗ್ ಪಾಸ್, ಕುಂಜಮ್ ಪಾಸ್, ಬರಾಲಾಚಾ ಸೇರಿದಂತೆ ಇತರೆ ಬೆಟ್ಟಗಳಲ್ಲಿ ಭಾರಿ ಹಿಮಪಾತವಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಚಳಿ ಹೆಚ್ಚಾಗಿದೆ, ಸೋಮವಾರವೂ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಿಮಪಾತದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದೆಹಲಿಯಲ್ಲಿ ಜನವರಿ 31 ರಂದು ಲಘು ಮಳೆಯಾಗಲಿದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ದೆಹಲಿ ಗರಿಷ್ಟ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ