AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ

Karnataka Rain Updates: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಮಳೆImage Credit source: IG News
TV9 Web
| Edited By: |

Updated on: Jan 24, 2023 | 6:00 AM

Share

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್​ ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ, ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಬೆಂಗಳೂರು ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಇನ್ನೂ ಕಳಪೆಯಾಗಿಯೇ ಉಳಿದಿದೆ, ಮುಂದಿನ ಕೆಲವು ದಿನಗಳವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ.

23 ರಂದು ಪಂಜಾಬ್, ಹರ್ಯಾಣ ಮತ್ತು ಚಂಡೀಗಢ ಮತ್ತು ಉತ್ತರ ಪ್ರದೇಶದಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಂತರ 24-27 ರ ಅವಧಿಯಲ್ಲಿ ದೆಹಲಿಯಲ್ಲಿ ಮೇಲೆ ಗುಡುಗು ಸಹಿತ ಚದುರಿದ ಮಳೆಯಾಗಲಿದೆ ಎಂದು ಹೇಳಲಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 13 ಮತ್ತು 08 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಂಬಾ, ಕಂಗ್ರಾ, ಮಂಡಿ, ಕುಲು, ಶಿಮ್ಲಾ, ಲಾಹೌಲ್-ಸ್ಪಿತಿ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಿಮಪಾತವಾಗುವ ನಿರೀಕ್ಷೆ ಇದೆ. ಜನವರಿ 25ರವರೆಗೆ ಬೆಟ್ಟ ಪ್ರದೇಶಗಳಲ್ಲಿ ಲಘುವಾಗಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮನಾಲಿಯಲ್ಲಿ 12 ಸೆಂ.ಮೀ, ಗೊಂಡ್ಲಾದಲ್ಲಿ 11 ಸೆಂ.ಮೀ, ಡಾಲ್ಹೌಸಿಯಲ್ಲಿ 8 ಸೆಂ.ಮೀ, ಕಲ್ಪಾದಲ್ಲಿ 7 ಸೆಂ.ಮೀ, ತಿಸ್ಸಾ, ಪೂಹ್ ಹಾಗೂ ಹಂಸಾದಲ್ಲಿ ತಲಾ ಐದು ಸೆಂ.ಮೀ ಹಿಮಪಾತವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್