ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ, ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಬೆಂಗಳೂರು ಎಚ್ಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಇನ್ನೂ ಕಳಪೆಯಾಗಿಯೇ ಉಳಿದಿದೆ, ಮುಂದಿನ ಕೆಲವು ದಿನಗಳವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ.
23 ರಂದು ಪಂಜಾಬ್, ಹರ್ಯಾಣ ಮತ್ತು ಚಂಡೀಗಢ ಮತ್ತು ಉತ್ತರ ಪ್ರದೇಶದಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಂತರ 24-27 ರ ಅವಧಿಯಲ್ಲಿ ದೆಹಲಿಯಲ್ಲಿ ಮೇಲೆ ಗುಡುಗು ಸಹಿತ ಚದುರಿದ ಮಳೆಯಾಗಲಿದೆ ಎಂದು ಹೇಳಲಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 13 ಮತ್ತು 08 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಚಂಬಾ, ಕಂಗ್ರಾ, ಮಂಡಿ, ಕುಲು, ಶಿಮ್ಲಾ, ಲಾಹೌಲ್-ಸ್ಪಿತಿ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಿಮಪಾತವಾಗುವ ನಿರೀಕ್ಷೆ ಇದೆ. ಜನವರಿ 25ರವರೆಗೆ ಬೆಟ್ಟ ಪ್ರದೇಶಗಳಲ್ಲಿ ಲಘುವಾಗಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮನಾಲಿಯಲ್ಲಿ 12 ಸೆಂ.ಮೀ, ಗೊಂಡ್ಲಾದಲ್ಲಿ 11 ಸೆಂ.ಮೀ, ಡಾಲ್ಹೌಸಿಯಲ್ಲಿ 8 ಸೆಂ.ಮೀ, ಕಲ್ಪಾದಲ್ಲಿ 7 ಸೆಂ.ಮೀ, ತಿಸ್ಸಾ, ಪೂಹ್ ಹಾಗೂ ಹಂಸಾದಲ್ಲಿ ತಲಾ ಐದು ಸೆಂ.ಮೀ ಹಿಮಪಾತವಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ