ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದಲ್ಲಿ (Karnataka Rains) ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.
ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಮುಂದಿನ ಮೂರು ದಿನಗಳ ಕಾಲ ಒಡಿಶಾ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಕೇರಳ, ತಮಿಳುನಾಡು, ರಾಜಸ್ಥಾನ ಸೇರಿದಂತೆ 17 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಹಳದಿ ಅಲರ್ಟ್ ಘೋಷಣೆ
ಛತ್ತೀಸ್‌ಗಢ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕವಾದ ಮಳೆಯನ್ನು ನಿರೀಕ್ಷಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ, ಕೊಂಕಣ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಯಾನಂ ಭಾಗದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ವಿದರ್ಭ, ತೆಲಂಗಾಣ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.