Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
Bangalore Rains: ಬೆಂಗಳೂರಿನಲ್ಲಿ ಇನ್ನೆರಡು ದಿನ ಹಗುವ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಬಹುದು.
Bengaluru Rain: ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಇನ್ನೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಇಂದಿನಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ (Karnataka Rain) ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಬಹುದು.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 24ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಮಲೆನಾಡು, ಉತ್ತರ ಒಳನಾಡಿನಲ್ಲಿ ಇನ್ನೂ 3 ದಿನ ವರುಣನ ಅಬ್ಬರ; ಕರಾವಳಿಯಲ್ಲಿ ಚದುರಿದ ಮಳೆ ಸಾಧ್ಯತೆ
ರಾಜ್ಯದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲೂ ವರುಣನ ಆರ್ಭಟ ಹೆಚ್ಚಾಗಲಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗಬಹುದು. ಲಕ್ಷದ್ವೀಪದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಅಸ್ಸಾಂ, ಮೇಘಾಲಯ, ಕೊಂಕಣ, ಗೋವಾ, ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.