Karnataka Rain: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ
Karnataka Weather Today: ಬೆಂಗಳೂರಿನಲ್ಲಿ 2 ದಿನಗಳಿಂದ ಬಿಸಿಲು ಕಾಣಿಸಿಕೊಂಡಿದ್ದು, ಮಳೆ ದೂರವಾಗಿದೆ. ಆದರೆ, ಇಂದು ಕರ್ನಾಟಕದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ದೆಹಲಿ, ಅಸ್ಸಾಂ, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯ ಆರ್ಭಟ (Heavy Rain) ಮುಂದುವರೆದಿದೆ. ಕರ್ನಾಟಕದಲ್ಲಿ ಮಳೆಯ (Karnataka Rains) ಆರ್ಭಟ ಕೊಂಚ ಕಡಿಮೆಯಾಗಿದ್ದರೂ ಪೂರ್ತಿಯಾಗಿ ನಿಂತಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಹಗುರ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಬಿಸಿಲು ಕಾಣಿಸಿಕೊಂಡಿದ್ದು, ಮಳೆ ದೂರವಾಗಿದೆ. ಆದರೆ, ಇಂದು ಕರ್ನಾಟಕದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇಂದು ಕರ್ನಾಟಕದ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಹಾಗೇ, ಕೇರಳ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಸ್ಸಾಂ, ಮೇಘಾಲಯ, ಸಿಕ್ಕಿಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆ ಅಥವಾ ಹಿಮವನ್ನು ನಿರೀಕ್ಷಿಸಲಾಗಿದೆ.
ಹಾಗೇ, ಅರುಣಾಚಲ ಪ್ರದೇಶ, ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನವನ್ನು ಹೊರತುಪಡಿಸಿ ಮುಂದಿನ 4 ದಿನಗಳಲ್ಲಿ ದೇಶದ ಯಾವುದೇ ಭಾಗಗಳಲ್ಲಿ ಯಾವುದೇ ಶಾಖದ ಅಲೆಗಳು ಬೆಳೆಯುವ ಸಾಧ್ಯತೆಯಿಲ್ಲ. ಇಂದು ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಚದುರಿದ ಮಳೆಯ ಚಟುವಟಿಕೆ ಇರಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು ಮಳೆ ಸಾಧ್ಯತೆ
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕವಾದ ಮಿಂಚು ಸಹಿತ ಮಳೆಯಾಗುತ್ತದೆ. ಮುಂದಿನ 4 ದಿನಗಳಲ್ಲಿ ಅರುಣಾಚಲ ಪ್ರದೇಶದ ಮೇಲೆ ಚದುರಿದ ಮಳೆಯಾಗುತ್ತದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು, ಮಿಂಚು ಮತ್ತು ರಭಸದ ಗಾಳಿಯೊಂದಿಗೆ ಚದುರಿದ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಅರೇಬಿಯನ್ ಸಮುದ್ರದ ಉತ್ತರ ಗುಜರಾತ್ ಕರಾವಳಿ, ನೈಋತ್ಯ ಮತ್ತು ವಾಯುವ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ