AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು, ಕೊಡಗು ಸೇರಿದಂತೆ ಹಲವೆಡೆ ಇಂದು ಕೂಡ ಸಾಧಾರಣ ಮಳೆ ಸಾಧ್ಯತೆ

Bengaluru Weather Today: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

Karnataka Rain: ಬೆಂಗಳೂರು, ಕೊಡಗು ಸೇರಿದಂತೆ ಹಲವೆಡೆ ಇಂದು ಕೂಡ ಸಾಧಾರಣ ಮಳೆ ಸಾಧ್ಯತೆ
ಮಳೆ
TV9 Web
| Edited By: |

Updated on: Dec 29, 2022 | 6:16 AM

Share

Bangalore Rains: ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆ ಇನ್ನೂ ನಿಂತಿಲ್ಲ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Weather) ಸೇರಿದಂತೆ ಕರ್ನಾಟಕದ ಹಲವೆಡೆ ಇಂದು (ಡಿ. 29) ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಳನಾಡಿನ (Karnataka Weather) ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇಂದು ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ವರುಣನ ಆರ್ಭಟ; ಡಿ. 29ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದ ಮೇಲೆ ಸಾಕಷ್ಟು ವ್ಯಾಪಕವಾದ ಹಿಮಪಾತ ಅಥವಾ ಮಳೆ ಬೀಳುತ್ತದೆ. ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಲಕ್ಷದ್ವೀಪದಲ್ಲಿ ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಉತ್ತರ ರಾಜಸ್ಥಾನ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜು ಬೀಳುವ ನಿರೀಕ್ಷೆಯಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ