Karnataka Rain: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮುಂದುವರಿದ ಮಳೆ; ಬೆಂಗಳೂರಿನಲ್ಲಿ ಚಳಿ ಶುರು

Karnataka Weather Today: ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಇನ್ನೂ ಸಂಪೂರ್ಣವಾಗಿ ಮಳೆ ನಿಂತಿಲ್ಲ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಇನ್ನೂ ಮುಂದುವರೆದಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮುಂದುವರಿದ ಮಳೆ; ಬೆಂಗಳೂರಿನಲ್ಲಿ ಚಳಿ ಶುರು
ಮಳೆImage Credit source: Live Mint
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 17, 2022 | 6:12 AM

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯ ಆರ್ಭಟ (Heavy Rainfall) ಕಡಿಮೆಯಾಗಿದೆ. ನಿರಂತರ ಮಳೆಯಿಂದ ಹೈರಾಣಾಗಿದ್ದ ಬೆಂಗಳೂರಿನ ಜನರು ಇದೀಗ ಕೊಂಚ ನಿರಾಳರಾಗಿದ್ದಾರೆ. ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಇನ್ನೂ ಸಂಪೂರ್ಣವಾಗಿ ಮಳೆ ನಿಂತಿಲ್ಲ. ಕರ್ನಾಟಕದ (Karnataka Rains) ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ.

ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಘಟಪ್ರಭಾ ನದಿ ಕೂಡ ಉಕ್ಕಿ ಹರಿಯುತ್ತಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ತಕ್ಕಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ ಮತ್ತು ಗುಜರಾತ್, ಕೊಂಕಣ ಮತ್ತು ಗೋವಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಉತ್ತರಾಖಂಡ, ಪಂಜಾಬ್, ಹಿಮಾಚಲ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಛತ್ತೀಸ್‌ಗಢದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ವಿದರ್ಭ, ಮರಾಠವಾಡ, ಆಂಧ್ರ ಪ್ರದೇಶದ ಕರಾವಳಿಯಲ್ಲಿ ಚದುರಿದಂತೆ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಲಕ್ಷದ್ವೀಪ, ಬಿಹಾರ, ಉತ್ತರ ಪ್ರದೇಶ, ಮರಾಠವಾಡ, ರಾಯಲಸೀಮಾ, ತೆಲಂಗಾಣದಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ಚೊಚ್ಚಲ ಏಕದಿನ ಶತಕ ಸಿಡಿಸಿದ ಹರ್ಲೀನ್ ಡಿಯೋಲ್
ಚೊಚ್ಚಲ ಏಕದಿನ ಶತಕ ಸಿಡಿಸಿದ ಹರ್ಲೀನ್ ಡಿಯೋಲ್
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ