Karnataka Rain: ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯಿಂದ ಇಂದು ಆರೆಂಜ್ ಅಲರ್ಟ್​ ಘೋಷಣೆ

Karnataka Weather Today: ಚಿಕ್ಕಮಗಳೂರಿನ ಕಳಸ, ಶೃಂಗೇರಿ, ಕೊಪ್ಪ, ಶಿವಮೊಗ್ಗದ ಸಾಗರ, ತೀರ್ಥಹಳ್ಳಿ, ಹೊಸನಗರ, ಹುಂಚದಕಟ್ಟೆ ಭಾಗಗಳಲ್ಲಿ ದಾಖಲೆಯ ಮಳೆಯಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ

Karnataka Rain: ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯಿಂದ ಇಂದು ಆರೆಂಜ್ ಅಲರ್ಟ್​ ಘೋಷಣೆ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Aug 09, 2022 | 6:14 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮುಂಗಾರು ಮಳೆ (Monsoon) ಬಿರುಸುಗೊಂಡಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ, ಇಂದು (ಆ. 9) ಕರಾವಳಿಯಲ್ಲಿ ಆರೆಂಜ್ ಅಲರ್ಟ್ (Orange Alert)​ ಘೋಷಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಲೆನಾಡಿನಲ್ಲಿ ಇಂದು ಮಳೆ (Rainfall) ಮುಂದುವರೆಯಲಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ವಿಶೇಷವಾಗಿ ತುಂಗಾ ಮತ್ತು ಭದ್ರಾ ನದಿಗಳ ಸಮೀಪವಿರುವ ಗ್ರಾಮಗಳಲ್ಲಿ ಭಾರೀ ಮಳೆಯ ನಂತರ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಅಣೆಕಟ್ಟೆಯಿಂದ ತುಂಗಭದ್ರಾ ನದಿಗೆ ಕನಿಷ್ಠ 1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಅಣೆಕಟ್ಟೆಯಲ್ಲಿ ಈಗಾಗಲೇ ನೀರಿನ ಮಟ್ಟ 1,631 ಅಡಿ ತಲುಪಿದೆ. ಸಮತೋಲನ ಕಾಯ್ದುಕೊಳ್ಳಲು 1 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದ್ದು, ತುಂಗಭದ್ರಾ ಅಣೆಕಟ್ಟಿನ ಕೆಳಭಾಗದಲ್ಲಿ ವಾಸಿಸುವ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಇದನ್ನೂ ಓದಿ: Karnataka Rain: ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

ಭದ್ರಾ, ಘಟಪ್ರಭಾ, ಮಲಪ್ರಭಾ, ಕೃಷ್ಣಾ, ಕಾವೇರಿ, ಕಬಿನಿ, ಹೇಮಾವತಿ, ಸೂಪಾ ಮತ್ತು ವಾರಾಹಿ ಮುಂತಾದ ನದಿಗಳು ಉಕ್ಕಿ ಹರಿಯುತ್ತಿವೆ. ಕರಾವಳಿ ಕರ್ನಾಟಕದ ನದಿಗಳು ಕೂಡ ತುಂಬಿ ಹರಿಯುತ್ತಿವೆ. ಮಲೆನಾಡಿನ ಎಲ್ಲ ನದಿಗಳೂ ಮೈದುಂಬಿ ನಿಂತಿವೆ. ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ಜುಲೈ 28ರಿಂದ ಮೇ 3ರ ನಡುವೆ ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು, ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಾದ್ಯಂತ ಇಂದಿನಿಂದ 3 ದಿನ ಮಳೆಯಿಂದ ಹಳದಿ ಅಲರ್ಟ್​ ಘೋಷಣೆ

ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರಿನ ಕಳಸ, ಶೃಂಗೇರಿ, ಕೊಪ್ಪ, ಶಿವಮೊಗ್ಗದ ಸಾಗರ, ತೀರ್ಥಹಳ್ಳಿ, ಹೊಸನಗರ, ಹುಂಚದಕಟ್ಟೆ ಭಾಗಗಳಲ್ಲಿ ದಾಖಲೆಯ ಮಳೆಯಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಗುಜರಾತ್, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಸೌರಾಷ್ಟ್ರ, ಕಚ್, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮರಾಠವಾಡ, ವಿದರ್ಭ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಾರ್ಖಂಡ್, ಗುಜರಾತ್, ಛತ್ತೀಸ್‌ಗಢ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಬಿಹಾರ, ಪೂರ್ವ ರಾಜಸ್ಥಾನ, ಕರಾವಳಿ ಆಂಧ್ರಪ್ರದೇಶ, ಯಾನಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೇರಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪಶ್ಚಿಮ ರಾಜಸ್ಥಾನ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ