Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲೂ ಭಾರೀ ಮಳೆ

Karnataka Weather Today: ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ.

Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲೂ ಭಾರೀ ಮಳೆ
ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ (ಸಂಗ್ರಹ ಚಿತ್ರ)Image Credit source: Deccan Herald
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 22, 2022 | 5:45 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಚುರುಕುಗೊಂಡಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗಲಿದ್ದು, ಭಾರತೀಯ ಹವಾಮಾನ ಇಲಾಖೆಯಿಂದ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ನಾಳೆಯಿಂದ 3 ದಿನ ಕರಾವಳಿಯಲ್ಲಿ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಜೂನ್ 25ರವರೆಗೆ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್‌, ಬೆಳಗಾವಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ನಿರೀಕ್ಷೆ ಇದ್ದು, ಈ ಜಿಲ್ಲೆಗಳಿಗೂ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಉಳಿದಂತೆ ಈ ಜಿಲ್ಲೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಸುರಿಯಲಿದೆ ಎನ್ನಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಅಂದರೆ ಜೂನ್ 25ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಎರಡು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.

ಇದನ್ನೂ ಓದಿ
Image
Viral Video: ಮಗುವನ್ನು ಬುಟ್ಟಿಯಲ್ಲಿಟ್ಟುಕೊಂಡು ಪ್ರವಾಹ ದಾಟಿದ ತಂದೆ; ವಿಡಿಯೋ ನೋಡಿ ಕಣ್ತುಂಬಿಕೊಂಡ ನೆಟ್ಟಿಗರು
Image
Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು
Image
Karnataka Rain: ಕರ್ನಾಟಕದಲ್ಲಿ ನಿಲ್ಲದ ಮಳೆಯ ಅಬ್ಬರ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

ರಾಜ್ಯಾದ್ಯಂತ ಮುಂದಿನ 4 ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಜತೆಗೆ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್‌ ಅಲರ್ಟ್‌’ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.

ಇಂದಿನಿಂದ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 25ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮುಂಗಾರು ಚುರುಕುಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ, ಮಂಡ್ಯದಲ್ಲಿ 4 ದಿನ ಭಾರೀ ಮಳೆ; ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

ಮುಂದಿನ ವಾರದಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಇಂದು ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶಿಸಲಿದೆ. ಅಸ್ಸಾಂ, ಮೇಘಾಲಯ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಪಾಯದ ಸ್ಥಳಗಳಲ್ಲಿರುವ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಜೂನ್ 25ರವರೆಗೆ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕೊಂಕಣ ಮತ್ತು ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಪಂಜಾಬ್, ಪಶ್ಚಿಮ ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ಗುಜರಾತ್, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ರಾಯಲಸೀಮಾ, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲೂ ಮಳೆಯಾಗಲಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್‌ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ