Karnataka Rain: ಇಂದು ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Karnataka Rain: ಇಂದು ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕ ಮಳೆ (ಸಾಂದರ್ಭಿಕ ಚಿತ್ರ)Image Credit source: FILE PHOTO
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 05, 2022 | 6:55 AM

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಬೆಂಗಳೂರಿನಲ್ಲಿ (Bengaluru Rains) ಮಳೆ ಕೊಂಚ ಕಡಿಮೆಯಾಗಿದ್ದರೂ ಶನಿವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಇನ್ನೂ ಒಂದು ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ.9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವೊಂದು ಜಿಲ್ಲೆಗಳಿಗೆ ಇಂದು (ಸೆ.05) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಇಂದು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಹಲವು ಕಡೆಗಳಲ್ಲಿ ಸಾಕಷ್ಟು ಮಹಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾರಪುರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 am, Mon, 5 September 22