AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯ ಅಬ್ಬರ ಸಾಧ್ಯತೆ

Karnataka Weather Today: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯ ಅಬ್ಬರ ಸಾಧ್ಯತೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 09, 2022 | 6:11 AM

Bengaluru Rain: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ (Karnataka Rain) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇಂದು ಬೆಂಗಳೂರು, ಮಲೆನಾಡು, ಕರಾವಳಿಯ ಕೆಲವೆಡೆ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಳಿ ಕಡಿಮೆಯಾಗಿ, ಬಿಸಿಲು ಕಾಣಿಸಿಕೊಂಡಿದೆ. ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ.

ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ; ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ

ಕರಾವಳಿ ಭಾಗದಲ್ಲಿ ಕೂಡ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ. ಧಾರವಾಡ, ಬೆಳಗಾವಿ, ಹಾವೇರಿ, ರಾಯಚೂರಿನಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕರ್ನಾಟಕದ ಉಳಿದೆಡೆ ಒಣ ಹವೆ ಮುಂದುವರೆಯಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ನವೆಂಬರ್ 10ರವರೆಗೆ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು 9ರಿಂದ 10ರ ಅವಧಿಯಲ್ಲಿ ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಬೀಳುವ ಸಾಧ್ಯತೆಯಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಬಹುದು. ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ರಾಜಸ್ಥಾನ, ಆಂಧ್ರಪ್ರದೇಶದಲ್ಲೂ ವರುಣನ ಆರ್ಭಟ ಹೆಚ್ಚಾಗಲಿದೆ.

ಇದನ್ನೂ ಓದಿ: Rain Updates: ಕರ್ನಾಟಕ ಸೇರಿ ದಕ್ಷಿಣ ಭಾರತದ ಈ ರಾಜ್ಯಗಳಲ್ಲಿ ಗುರುವಾರದವರೆಗೂ ವ್ಯಾಪಕ ಮಳೆ; ಹವಾಮಾನ ಇಲಾಖೆ ಅಲರ್ಟ್​

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ನವೆಂಬರ್ 9-10 ಮತ್ತು ಉತ್ತರ ರಾಜಸ್ಥಾನದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಮತ್ತು ನವೆಂಬರ್ 9ರಿಂದ 10ರವರೆಗೆ ಸಾಧಾರಣ ಮಳೆ ಅಥವಾ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ