Bengaluru Rain: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ (Karnataka Rain) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇಂದು ಬೆಂಗಳೂರು, ಮಲೆನಾಡು, ಕರಾವಳಿಯ ಕೆಲವೆಡೆ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಳಿ ಕಡಿಮೆಯಾಗಿ, ಬಿಸಿಲು ಕಾಣಿಸಿಕೊಂಡಿದೆ. ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ.
ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ; ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ
ಕರಾವಳಿ ಭಾಗದಲ್ಲಿ ಕೂಡ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ. ಧಾರವಾಡ, ಬೆಳಗಾವಿ, ಹಾವೇರಿ, ರಾಯಚೂರಿನಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕರ್ನಾಟಕದ ಉಳಿದೆಡೆ ಒಣ ಹವೆ ಮುಂದುವರೆಯಲಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ನವೆಂಬರ್ 10ರವರೆಗೆ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು 9ರಿಂದ 10ರ ಅವಧಿಯಲ್ಲಿ ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಬೀಳುವ ಸಾಧ್ಯತೆಯಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಬಹುದು. ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ರಾಜಸ್ಥಾನ, ಆಂಧ್ರಪ್ರದೇಶದಲ್ಲೂ ವರುಣನ ಆರ್ಭಟ ಹೆಚ್ಚಾಗಲಿದೆ.
ಇದನ್ನೂ ಓದಿ: Rain Updates: ಕರ್ನಾಟಕ ಸೇರಿ ದಕ್ಷಿಣ ಭಾರತದ ಈ ರಾಜ್ಯಗಳಲ್ಲಿ ಗುರುವಾರದವರೆಗೂ ವ್ಯಾಪಕ ಮಳೆ; ಹವಾಮಾನ ಇಲಾಖೆ ಅಲರ್ಟ್
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ನವೆಂಬರ್ 9-10 ಮತ್ತು ಉತ್ತರ ರಾಜಸ್ಥಾನದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಮತ್ತು ನವೆಂಬರ್ 9ರಿಂದ 10ರವರೆಗೆ ಸಾಧಾರಣ ಮಳೆ ಅಥವಾ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ.