Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ
Rain Updates: ನಾಳೆ (ಬುಧವಾರ) ಭಾರತೀಯ ಹವಾಮಾನ ಇಲಾಖೆಯಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಮಳೆಯ ಆರ್ಭಟ (Rainfall) ಕಡಿಮೆಯಾಯಿತು ಎಂದು ನಿಟ್ಟುಸಿರು ಬಿಡುತ್ತಿದ್ದೀರಾ? ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ನಾಲ್ಕು ದಿನ ಕರ್ನಾಟಕ (Karnataka Rains) ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಮೇ 18ರಂದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ (ಬುಧವಾರ) ಭಾರತೀಯ ಹವಾಮಾನ ಇಲಾಖೆಯಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ.
ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಪಾಯದ ಸನ್ನಿವೇಶ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ರೆಡ್ ಅಲರ್ಟ್ ನೀಡಲಾಗುತ್ತದೆ. ಮುಂದಿನ 4 ದಿನಗಳಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಭಾಗದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಹಾಗೇ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆಯಿದೆ.
All India Weather Warnings for next Five days. For more details visit.Heat wave warnings: Heat wave conditions in isolated pockets very likely over northeast Rajasthan, Punjab, Haryana, Chandigarh & Delhi, south Uttar Pradesh, Vidarbha and north Madhya Pradesh on 16th and pic.twitter.com/azazZGSuN4
— India Meteorological Department (@Indiametdept) May 16, 2022
ಮೇ 18ರವರೆಗೆ ತಮಿಳುನಾಡಿನಲ್ಲಿ ಮತ್ತು ಮೇ 17ರಂದು ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಮೇ 18ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮೇ 18ರಂದು ಕರಾವಳಿಯಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಂದು ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 4 ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮೇ 17, 18ರಂದು, ಮೇ 19, 20ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ನೈಋತ್ಯ ಮಾರುತಗಳು ಬಲಗೊಳ್ಳುವುದರಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ