Weather Today: ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಹೆಚ್ಚಾಗುತ್ತಿದ್ದು, ಇಂದಿನಿಂದ 2 ದಿನ ವರುಣನ ಆರ್ಭಟ (Heavy Rainfall) ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇಂದಿನಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಇಂದು ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದ ಉಳಿದ ಭಾಗಗಳಲ್ಲಿ ಇಂದು ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಲ್ಲಿ 5 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಲೆನಾಡು, ಅರೆ ಬಯಲು ಸೀಮೆ ಪ್ರದೇಶದಲ್ಲಿ ಮುಂಗಾರು ಮಳೆ ನಿಧಾನವಾಗಿ ಪ್ರವೇಶಿಸುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಲಿದೆ.
ಇದನ್ನೂ ಓದಿ: Guwahati Rain: ಗುವಾಹಟಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ; ನಾಲ್ವರು ಕಾರ್ಮಿಕರು ಜೀವಂತ ಸಮಾಧಿ
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16ರಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
oRainfall activity likely to increase over Bihar, Jharkhand, Odisha and Gangetic West Bengal with fairly widespread to widespread rainfall with thunderstorm/lightning/gusty winds during next 5 days. pic.twitter.com/etYszojhsT
— India Meteorological Department (@Indiametdept) June 14, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಮಳೆಯಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಉಪಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಜಾರ್ಖಂಡ್, ಉತ್ತರಾಖಂಡ, ಮಧ್ಯಪ್ರದೇಶ, ಗೋವಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಕಂಗಾಲು; ಇನ್ನೂ 3 ದಿನ ಹಳದಿ ಅಲರ್ಟ್ ಘೋಷಣೆ
ಬಿಹಾರ, ಪಂಜಾಬ್, ಹಿಮಾಚಲ ಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ವಿದರ್ಭ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ ಮತ್ತು ಕರ್ನಾಟಕದ ಒಳನಾಡಿನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ ಮತ್ತು ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದ ಕೆಲವು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ತಾಪಮಾನ ಹೆಚ್ಚಿರುವ ಸಾಧ್ಯತೆಯಿದೆ.
ಉತ್ತರ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಗುಜರಾತ್ ರಾಜ್ಯದ ಕೆಲವು ಭಾಗಗಳು, ದಕ್ಷಿಣ ಮಧ್ಯಪ್ರದೇಶದ ಕೆಲವು ಭಾಗಗಳು, ಸಂಪೂರ್ಣ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರ್ನಾಟಕ ಮತ್ತು ತಮಿಳುನಾಡು, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯ ಗಾಳಿಯೊಂದಿಗೆ ಸಾಕಷ್ಟು ವ್ಯಾಪಕವಾದ ಮಳೆಯಾಗುತ್ತದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ