Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆ

Karnataka Weather Today: ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆ
ಪ್ರಾತಿನಿಧಿಕ ಚಿತ್ರ
Image Credit source: ಪಿಟಿಐ
TV9kannada Web Team

| Edited By: Sushma Chakre

Jul 27, 2022 | 6:07 AM

Monsoon 2022: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ (Rainfall) ಹೆಚ್ಚಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ (Kalburgi Rain) ಹಾಗೂ ಬೀದರ್ (Bidar Rain) ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಸಂಜೆಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಪ್ರಮಾಣ ಕಡಿಮೆಯಾದರೂ ರಾಜ್ಯದ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ ಸುರಿಯಲಿದೆ.

ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಬೀದರ್​​ನ ಶಾಲೆಗಳಿಗೆ ರಜೆ; ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಣೆ

ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜಲಾವೃತಗೊಂಡಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ಮಳೆ ಆರ್ಭಟ ಕಡಿಮೆಯಾಗಿದ್ದರೂ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮುಂತಾದ ಕಡೆಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣವಿದೆ. ಇಂದು ಮಳೆಯ ವಾತಾವರಣ ಇರುವ ಕಾರಣಕ್ಕೆ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗುವುದರಿಂದ ಈ ಭಾಗದ ಸಮುದ್ರ ತೀರದಲ್ಲಿ ಗಾಳಿಯ ವೇಗ ಸಾಮಾನ್ಯವಾಗಿರಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು (ಬುಧವಾರ) ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ಪುದುಚೇರಿ, ಕಾರೈಕಲ್, ತಮಿಳುನಾಡುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಮುಂತಾದ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದುವರೆದ ಮಳೆ; ನಾಳೆಯಿಂದ ರಾಜ್ಯಾದ್ಯಂತ ವರುಣನ ಆರ್ಭಟ ಹೆಚ್ಚಳ

ಮಾನ್ಸೂನ್ ಮಾರುತಗಳು ಉತ್ತರ ಕಡೆಗೆ ಬೀಸುತ್ತಿರುವುದರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಯಾವುದೇ ರಾಜ್ಯಗಳಿಗೆ ಯೆಲ್ಲೋ ಅಥವಾ ರೆಡ್ ಅಲರ್ಟ್ ಘೋಷಿಸಿಲ್ಲವಾದರೂ, ಮಳೆಯ ಪ್ರಮಾಣ ಹೆಚ್ಚಾಗಲಿದೆ. ಜುಲೈ 28ರವರೆಗೆ ಗುಜರಾತ್, ವಿದರ್ಭ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada