AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮಲೆನಾಡು, ಕರಾವಳಿಯಲ್ಲಿ ಮಳೆಯಿಂದ ಜೂ. 30ರವರೆಗೆ ಆರೆಂಜ್ ಅಲರ್ಟ್​ ಘೋಷಣೆ

Karnataka Weather Today: ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಮಲೆನಾಡು, ಕರಾವಳಿಯಲ್ಲಿ ಮಳೆಯಿಂದ ಜೂ. 30ರವರೆಗೆ ಆರೆಂಜ್ ಅಲರ್ಟ್​ ಘೋಷಣೆ
ಬೆಂಗಳೂರಿನಲ್ಲಿ ಮಳೆImage Credit source: India Today
TV9 Web
| Edited By: |

Updated on: Jun 28, 2022 | 5:54 AM

Share

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ಇಂದಿನಿಂದ ಜೂನ್ 30ರವರೆಗೆ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಮಲೆನಾಡಿನಲ್ಲಿ ಕೂಡ ಇಂದು ಮಳೆ ಹೆಚ್ಚಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು (ಜೂನ್ 28) ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗಲಿದೆ. ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲೂ ಸಂಜೆ ಬಳಿಕ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಗೋವಾ, ಬಿಹಾರ, ಉತ್ತರ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಕೇರಳ, ಮಾಹೆ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಉತ್ತರ ಪ್ರದೇಶ, ಉತ್ತರಾಖಂಡ, ವಿದರ್ಭ , ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ; ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ​ ಅಲರ್ಟ್​ ಘೋಷಣೆ

ಗುಜರಾತ್, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ ಮತ್ತು ಕರ್ನಾಟಕದ ಒಳನಾಡಿನಲ್ಲಿ ಮಿಂಚು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ. ತೆಲಂಗಾಣ, ತಮಿಳುನಾಡು, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ರಾಜಸ್ಥಾನಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಜಾರ್ಖಂಡ್, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಲಿದೆ.

ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಕೊಂಕಣ ಮತ್ತು ಗೋವಾದಲ್ಲಿ ಅತಿ ಹೆಚ್ಚು ಮಳೆಯಾಗುತ್ತದೆ. ಮುಂದಿನ 4 ದಿನಗಳಲ್ಲಿ ಗುಜರಾತ್, ಮಧ್ಯ ಮಹಾರಾಷ್ಟ್ರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬುಧವಾರ, ಗುರುವಾರ ಮಳೆಯಾಗಲಿದೆ. ಜೂನ್ 30ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.

ಉತ್ತರಾಖಂಡದಲ್ಲಿ ಬುಧವಾರ ಭಾರೀ ಮಳೆಯಾಗಲಿದೆ. ಜೂನ್ 30ರವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಭಾರೀ ಮಳೆಯಾಗಲಿದೆ. ಇಂದು ಮತ್ತು ಬುಧವಾರ ಬಿಹಾರದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

Follow Us
TV9 Web
TV9 Web

TV9 Kannada

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು