Karnataka Rain: ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ; ಜೂನ್. 26ರವರೆಗೆ ಆರೆಂಜ್ ಅಲರ್ಟ್ ಘೋಷಣೆ
Karnataka Weather Today: ಕರಾವಳಿ, ಮಲೆನಾಡಿನಲ್ಲಿ ಮಳೆಯಿಂದ ಇಂದಿನಿಂದ ಜೂ. 26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಈಗಾಗಲೇ ಕರಾವಳಿ, ಕೊಡಗು, ಮಲೆನಾಡಿನಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದಲ್ಲಿ (Karnataka Rains) ಮಳೆಯ ಆರ್ಭಟ ಇನ್ನೂ 3 ದಿನಗಳ ಕಾಲ ಮುಂದುವರೆಯಲಿದೆ. ಜೂನ್ 26ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಹೀಗಾಗಿ, ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಈಗಾಗಲೇ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ಭೇಟಿ ನೀಡದಂತೆ ಸೂಚಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಲ್ಲೇ ಈ ಬಾರಿ ಜೂನ್ನಲ್ಲಿ ಅತಿ ಮಳೆಯನ್ನು ಕಂಡಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದ್ದು, ಜೂನ್ 26ರ ತನಕ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ ಅಬ್ಬರಿಸಲಿದೆ ಎಂದು ಹೇಳಿದೆ. ಈ ಮೂರು ಜಿಲ್ಲೆಗಳಿಗೆ 3 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
Intense spell of rainfall very likely to continue along west coast during next 5 days.
Subdued rainfall activity over Northwest & adjoining Central India till 25th June, 2022. pic.twitter.com/0tKmRJNGYC
— India Meteorological Department (@Indiametdept) June 23, 2022
ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜೂ. 25 ಮತ್ತು ಜೂ.26 ರಂದು ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆ ಇದೆ. ಎರಡು ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಭಾಗದಲ್ಲಿ ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭವಾಗಿವೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡಿನ ಇತರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೊಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಇಂದಿನಿಂದ ಜೂನ್ 26ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಾಗಿದೆ.
ಇದನ್ನೂ ಓದಿ: Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಳದಿ ಅಲರ್ಟ್ ಘೋಷಣೆ; ಮಲೆನಾಡಿನಲ್ಲೂ ಭಾರೀ ಮಳೆ
ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಮುಂದಿನ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಿಗೂ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಬೆಂಗಳೂರಿನಲ್ಲಿ ದಾಖಲೆಯ ಮಳೆ:
ಬೆಂಗಳೂರಿನಲ್ಲಿ ಜೂನ್ 1ರಿಂದ 198.5 ಮಿಮೀ ಮಳೆ ದಾಖಲಾಗಿದೆ. ಇದು ಕಳೆದ 10 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಈ ತಿಂಗಳನ್ನು ದಶಕದಲ್ಲೇ ಅತಿ ಹೆಚ್ಚು ಮಳೆಯಾದ ತಿಂಗಳೆಂದು ದಾಖಲಿಸಿದೆ. 2016ರ ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ 191.3 ಮಿಮೀ ಮಳೆ ದಾಖಲಾಗಿತ್ತು. ಆ ದಾಖಲೆಯನ್ನು ಈ ವರ್ಷದ ಮಳೆಗಾಲ ಮುರಿದಿದ್ದು, ಈ ವರ್ಷ ಜೂನ್ ತಿಂಗಳಲ್ಲಿ 198.5 ಮಿ.ಮೀ ಮಳೆಯಾಗಿದೆ.
10:00AM Update #Bengaluru:
SWM clouds ??
Low clouds sweeping in from the West
Overcast conditions with very light passing showers to prevail over the city.#BangaloreRains #BangaloreWeather #BengaluruRains #Bangalore #BengaluruWeather #BengaluruRain #BangaloreRain #Monsoon pic.twitter.com/QCz7lOL3Zr
— ಕರ್ನಾಟಕ/ಬೆಂಗಳೂರು ಹವಾಮಾನ ?❤️ (@Bnglrweatherman) June 23, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕೊಂಕಣ, ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿದರ್ಭ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡು, ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಆಂಧ್ರಪ್ರದೇಶ ಕರಾವಳಿ, ಯಾನಂ, ಮಾಹೆ, ಕರಾವಳಿ ಮತ್ತು ಉತ್ತರ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಸಿಡಿಲು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳದ ಕರಾವಳಿ ಮತ್ತು ಲಕ್ಷದ್ವೀಪದ ಉದ್ದಕ್ಕೂ ಭಾರೀ ಮಳೆಯಾಗಲಿದೆ. ಮುಂದಿನ 3 ದಿನಗಳಲ್ಲಿ ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.