Karnataka Rain: ಉತ್ತರ ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ; ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Jun 26, 2022 | 5:56 AM

Karnataka Weather Today: ಮಲೆನಾಡು, ಕರಾವಳಿಯಲ್ಲಿ ಮಳೆ ಮುಂದುವರೆದಿದ್ದು, ಇಂದು ಆರೆಂಜ್ ಅಲರ್ಟ್​ ​ಘೋಷಿಸಲಾಗಿದೆ. ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Karnataka Rain: ಉತ್ತರ ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ; ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ
ಮಳೆ
Follow us on

ಬೆಂಗಳೂರು: ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಸೇರಿದಂತೆ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆ ಮುಂದುವರೆದಿದೆ. ಇಂದು ಕೂಡ ಮಲೆನಾಡು, ಕರಾವಳಿಯಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ​ (Orange Alert) ಘೋಷಿಸಲಾಗಿದೆ. ಇಂದು ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ, ಧಾರವಾಡದಲ್ಲಿ ಹಳದಿ ಅಲರ್ಟ್‌ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ ಅಬ್ಬರಿಸಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ; ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ​ ಅಲರ್ಟ್​ ಘೋಷಣೆ

ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ. ಹೀಗಾಗಿ, ‘ಯೆಲ್ಲೋ ಅಲರ್ಟ್​’ ನೀಡಲಾಗಿದೆ. ಕರಾವಳಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಹಿಮಾಲಯದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭಾರೀ ಗಾಳಿಯೊಂದಿಗೆ ಸಾಧಾರಣ ಮಳೆಯಾಗುತ್ತದೆ ಎನ್ನಲಾಗಿದೆ. ಈಶಾನ್ಯ ಭಾರತ, ಕೇರಳ, ಕರ್ನಾಟಕದ ಒಳಭಾಗ, ತಮಿಳುನಾಡಿನ ಕೆಲವು ಭಾಗಗಳು ಮತ್ತು ತೆಲಂಗಾಣದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ದೇಶದ ವಾಯುವ್ಯ ಭಾಗಗಳಾದ ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಹೆಚ್ಚಿನ ಭಾಗಗಳು ಇಂದು ಶುಷ್ಕ ವಾತಾವರಣವಿರುತ್ತದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಮಹಾರಾಷ್ಟ್ರ, ಗೋವಾ, ತೆಲಂಗಾಣ, ಕರ್ನಾಟಕ ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಮಧ್ಯಪ್ರದೇಶದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಗೋವಾದ ಕರಾವಳಿ ಭಾಗಗಳಲ್ಲಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗುಜರಾತ್ ಮತ್ತು ತಮಿಳುನಾಡಿನಲ್ಲಿ ಮಿಂಚು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮೇಘಾಲಯ, ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರಾಖಂಡ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಉತ್ತರ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ.