Karnataka Rain: ಮಳೆಯಿಂದ ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ

Karnataka Weather Today: ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆ ಇದೆ.

Karnataka Rain: ಮಳೆಯಿಂದ ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 11, 2022 | 6:12 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ (Heavy Rainfall) ಕೊಂಚ ಕಡಿಮೆಯಾಗಿದೆ. ಬುಧವಾರದಿಂದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಕೊಂಚ ಇಳಿಮುಖವಾಗಿದೆ. ನಿನ್ನೆ ಶಿವಮೊಗ್ಗ (Shimoga Rain), ಚಿಕ್ಕಮಗಳೂರು (Chikmagalur Rain), ಕೊಡಗು (Kodagu Rains), ಹಾಸನ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿತ್ತು. ಇಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಹೀಗಾಗಿ, ಶುಕ್ರವಾರದವರೆಗೆ ಈ 8 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಳೆಯ ಬಿರುಸು ಕಡಿಮೆಯಾಗಿದ್ದರೂ ವರುಣನ ಅಬ್ಬರ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಗಾಳಿಯ ವೇಗ 60 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ದಕ್ಷಿಣ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಮೂವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಕರ್ನಾಟಕ ಮಾತ್ರವಲ್ಲದೆ ಇಂದು ಮಧ್ಯಪ್ರದೇಶ, ಗುಜರಾತ್, ಕೇರಳ ಮತ್ತು ಮಾಹೆಯ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ರಾಜಸ್ಥಾನ, ಕೊಂಕಣ, ಗೋವಾ, ಮಹಾರಾಷ್ಟ್ರ ಮತ್ತು ವಿದರ್ಭದಲ್ಲಿ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ತಮಿಳುನಾಡು, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ