AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಸೆ. 9ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ; ಕರಾವಳಿಯಲ್ಲಿ ಬಿರುಗಾಳಿ

Karnataka Weather Today: ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ. ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

Karnataka Rain: ಸೆ. 9ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ; ಕರಾವಳಿಯಲ್ಲಿ ಬಿರುಗಾಳಿ
ಮಳೆ
TV9 Web
| Edited By: |

Updated on: Sep 04, 2022 | 6:00 AM

Share

Bangalore Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ (Bengaluru Rains) ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ. ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ.

ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

ಇಂದಿನಿಂದ ಸೋಮವಾರ ಬೆಳಗ್ಗೆ 8.30ರವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ಸೋಮವಾರದಿಂದ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆ. 9ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಸೆ. 9ರವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯಲಿದೆ. ಸೆ. 6ರಂದು ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾದ್ಯತೆ ಇದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ, ಕೊಡಗು, ಮಲೆನಾಡಿನಲ್ಲಿ ಇಂದಿನಿಂದ ಸೆ. 6ರವರೆಗೆ ಮಳೆ; ಹಳದಿ ಅಲರ್ಟ್ ಘೋಷಣೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಮೇಘಾಲಯದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಲಕ್ಷದ್ವೀಪ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಾದ್ಯಂತ ಭಾರೀ ಮಳೆಯಾಗಲಿದೆ. ಮುಂದಿನ 5 ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ