AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಭಾರೀ ಮಳೆಯಿಂದ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ​ಘೋಷಣೆ; ಇನ್ನೂ 3 ದಿನ ವರುಣನ ಆರ್ಭಟ

Karnataka Weather Today: ನೈಋತ್ಯ ಅರೇಬಿನ್ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ

Karnataka Rain: ಭಾರೀ ಮಳೆಯಿಂದ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ​ಘೋಷಣೆ; ಇನ್ನೂ 3 ದಿನ ವರುಣನ ಆರ್ಭಟ
ಬೆಂಗಳೂರಿನಲ್ಲಿ ಮಳೆImage Credit source: IANS
TV9 Web
| Edited By: |

Updated on: May 18, 2022 | 5:55 AM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಬಿಹಾರ, ಜಮ್ಮು ಕಾಶ್ಮೀರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಅಸ್ಸಾಂನಲ್ಲೂ ಮಳೆಯ ಅಬ್ಬರವಾಗುತ್ತಿದೆ. ಇಂದಿನಿಂದ 3 ದಿನ ಕರ್ನಾಟಕ (Karnataka Rains), ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು (ಮೇ 18) ಕರ್ನಾಟಕದ ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ನೈಋತ್ಯ ಅರೇಬಿನ್ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ತಜ್ಞ, ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗ ಮುಖ್ಯಸ್ಥ ಡಾ. ಆರ್.ಎಚ್. ಪಾಟೀಲ ಮಾಹಿತಿ ನೀಡಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೊತೆಗೆ ಬಿರುಸಿನ ಗಾಳಿ ಉಂಟಾಗುವ ಸಾಧ್ಯತೆಯಿದೆ. ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಒಂದೆರಡು ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯನ ಆರ್ಭಟ ಮತ್ತೆ ಶುರುವಾಗಿದೆ. ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಮೇ 19ರಂದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಮೇ 20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಭಾರೀ ಪ್ರವಾಹ; 7 ಮಂದಿ ಸಾವು, 2 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಇದನ್ನೂ ಓದಿ
Image
Assam Flood: ಅಸ್ಸಾಂನಲ್ಲಿ ಭಾರೀ ಪ್ರವಾಹ; 7 ಮಂದಿ ಸಾವು, 2 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
Image
Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ
Image
Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ
Image
Karnataka Rain: ಇಂದಿನಿಂದ 4 ದಿನ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 3 ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ಮೇ 19, 20ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಪಾಯದ ಸನ್ನಿವೇಶ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ರೆಡ್ ಅಲರ್ಟ್​ ನೀಡಲಾಗುತ್ತದೆ. ಮುಂದಿನ 3 ದಿನಗಳಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಭಾಗದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಹಾಗೇ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆಯಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ನೈಋತ್ಯ ಮಾರುತಗಳು ಬಲಗೊಳ್ಳುವುದರಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅರೇಬಿಯನ್ ಸಮುದ್ರದಿಂದ ಭಾರತದ ಕಡೆಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ಪಶ್ಚಿಮ ಗಾಳಿಯು ಬೀಸುತ್ತಿರುವ ಪರಿಣಾಮ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಇನ್ನು ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ

ಹವಾಮಾನ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇನ್ನು ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕಿ ಹರಿದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್