Karnataka Rain: ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ; ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Aug 12, 2022 | 5:49 AM

Karnataka Weather Today: ಕರ್ನಾಟಕದ 8 ಜಿಲ್ಲೆಗಳಿಗೆ ಇನ್ನೆರಡು ದಿನ 'ಹಳದಿ ಅಲರ್ಟ್' ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಗುಡುಗು ಸಹಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ.

Karnataka Rain: ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ; ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ
ಮಳೆ
Follow us on

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ (Heavy Rainfall) ಕೊಂಚ ಕಡಿಮೆಯಾಗಿದ್ದರೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದ ಮಳೆರಾಯ ಕೊಂಚ ಶಾಂತನಾಗಿದ್ದು, ಹಗುರ ಮಳೆ ಮುಂದುವರೆದಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಇಂದು ಮತ್ತು ನಾಳೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಕರಾವಳಿ ಭಾಗದ ಉಡುಪಿ (Udupi Rains), ಉತ್ತರ ಕನ್ನಡ (Uttara Kannada Rain) ಮತ್ತು ದಕ್ಷಿಣ ಕನ್ನಡ (Dakshina Kannada Rain) ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿರುಗಾಳಿ ಸಹಿತ ಭಾರೀ ಪ್ರಮಾಣದ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ.

ಕರ್ನಾಟಕದ 8 ಜಿಲ್ಲೆಗಳಿಗೆ ಇನ್ನೆರಡು ದಿನ ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಆಗಾಗ ಕೆಲವು ಕಡೆಗಳಲ್ಲಿ ಸಾಮಾನ್ಯ ಇಲ್ಲವೇ ತುಂತುರು ಮಳೆ ಸುರಿಯುವ ಸಾಧ್ಯತೆ ಇದೆ. ಬಳ್ಳಾರಿ, ಹಂಪಿ, ಹಾಸನ ಜಿಲ್ಲೆಗಳಲ್ಲಿ ಗರಿಷ್ಠ ತಲಾ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆ ಕೊಂಚ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇನ್ನೆರಡು ದಿನಗಳ ಕಾಲ ಮಧ್ಯ ಭಾರತದಾದ್ಯಂತ ಭಾರೀ ಮಳೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ. ಮೊಹಾಪಾತ್ರ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ

ಕರಾವಳಿ ಕರ್ನಾಟಕ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಸಾಧಾರಣದಿಂದ ಭಾರೀ ಪ್ರಮಾಣದ ಗುಡುಗು ಸಹಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸುಮಾರು 11.5 ಸೆಂ.ಮೀವರೆಗೆ ಮಳೆಯಾಗುವ ಸೂಚನೆ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ ಮತ್ತು ಗುಜರಾತ್ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಸೌರಾಷ್ಟ್ರ, ಕಚ್, ಕೊಂಕಣ, ಗೋವಾ, ಮಹಾರಾಷ್ಟ್ರ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಮಾಹೆಯಲ್ಲಿ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಗುಡುಗು ಸಹಿತ ಸಾಕಷ್ಟು ವ್ಯಾಪಕವಾದ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯಿಂದ ಇಂದು ಆರೆಂಜ್ ಅಲರ್ಟ್​ ಘೋಷಣೆ

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಮರಾಠವಾಡ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ರಾಯಲಸೀಮಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ