Karnataka Rain: ಮಳೆ: ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್? ಯಾವ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್?

Bengaluru Rain: ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಜೋರಾಗಿಯೇ ಸುರಿಯುವ ಸಾಧ್ಯತೆಯಿದೆ.

Karnataka Rain: ಮಳೆ: ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್? ಯಾವ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್?
ಮಳೆ
Follow us
TV9 Web
| Updated By: guruganesh bhat

Updated on: Oct 04, 2021 | 2:49 PM

Karnataka Rain Updates; ಕರ್ನಾಟಕದಲ್ಲಿ ಇಂದು ಸೋಮವಾರದಂದು (ಅಕ್ಟೋಬರ್ 4) ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮಂಗಳವಾರದಿಂದ ಎರಡು ದಿನ ಶಾಹೀನ್ ಚಂಡಮಾರುತ ಪ್ರಭಾವ ರಾಜ್ಯದ ಮೇಲೆ ಬೀರಲಿದ್ದು, ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮಂಗಳವಾರದಿಂದ ರಾಜ್ಯದಲ್ಲಿ 2 ದಿನ ಭಾರಿ ಮಳೆ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಚಿಕ್ಕಮಗಳೂರು, ತುಮಕೂರು ಜಿಲ್ಲೆ, ಬೆಂಗಳೂರು ನಗರದಲ್ಲಿ ಆರೆಂಜ್ ಅಲರ್ಟ್ (Bengaluru Rain Updates)  ಘೋಷಿಸಲಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗಿದ್ದು, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕೋರಮಂಗಲ, ಹನುಮಂತನಗರ, ಗಿರಿನಗರ, ಎಂಜಿ ರಸ್ತೆ, ಪದ್ಮನಾಭನಗರ, ಉತ್ತರಹಳ್ಳಿ, ಆರ್​ಆರ್​ ನಗರ, ವಿಜಯನಗರ, ಚಾಮರಾಜಪೇಟೆ ಸುತ್ತಮುತ್ತಲೂ ಭಾನುವಾರ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮಳೆ ಸುರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ, ರಸ್ತೆಗಳೆಲ್ಲ ಕೆರೆಗಳಂತಾಗಿತ್ತು. ಕೆಲವೆಡೆ ರಾಜಕಾಲುವೆ ಉಕ್ಕಿ ಹರಿದ ಘಟನೆಯೂ ನಡೆಯಿತು. ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹೆಚ್‌ಎಎಲ್ ಬಳಿಯ ರಮೇಶ್ ನಗರದಲ್ಲಿ ಗೋಡೆ ಕುಸಿತವಾಗಿದೆ. ಹೆಚ್‌ಎಎಲ್‌ಗೆ ಸೇರಿದ 12 ಅಡಿ ಎತ್ತರದ ಗೋಡೆ ಕುಸಿತವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಶೇ. 8ರಷ್ಟು ಕಡಿಮೆ ಮಳೆಯಾಗಿದೆ. ಇಂದು ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಅ. 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಕಲಬುರ್ಗಿಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಗಳು ನಾಶವಾಗಿವೆ. ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: 

Bengaluru Rain Photos: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ; ಪೋಟೋಗಳು ಇಲ್ಲಿವೆ

Karnataka Dams Water Level: ರಾಜ್ಯದಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ