Monsoon 2022: ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 2 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ಆಗಸ್ಟ್ 25ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ ಸಾಧ್ಯತೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್ 25ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 2 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಡೀ ವಾರ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೇ, ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಇನ್ನೊಂದು ವಾರ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಂದು ಮತ್ತು ನಾಳೆ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡು, ಕೊಡಗು, ಮೈಸೂರು, ಕೋಲಾರ, ಹಾಸನದಲ್ಲಿ ಇನ್ನು 3 ದಿನ ಮಳೆ; ಹಳದಿ ಅಲರ್ಟ್ ಘೋಷಣೆ
ಇಂದು ಯಾವ ರಾಜ್ಯಗಳಲ್ಲಿ ಮಳೆ ಹೆಚ್ಚಳ?:
ಇಂದು ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸೌರಾಷ್ಟ್ರ, ಕಚ್, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಹಿಮಾಚಲ ಪ್ರದೇಶ, ರಾಜಸ್ಥಾನ, ಬಿಹಾರ, ಜಾರ್ಖಂಡ್ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.