AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ಮಳೆಯ ಅಬ್ಬರ; ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​ ಘೋಷಣೆ

Bangalore Weather Today: ಇನ್ನೆರಡು ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

Karnataka Rain: ಕರ್ನಾಟಕದಲ್ಲಿ ಮಳೆಯ ಅಬ್ಬರ; ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Nov 05, 2022 | 6:12 AM

Share

Bengaluru Rain: ಕರ್ನಾಟಕದಲ್ಲಿ (Karnataka Rain) ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಕಳೆದ ವಾರದವರೆಗೆ ಕಡಿಮೆಯಾಗಿದ್ದ ಮಳೆಯ ಅಬ್ಬರ ಇದೀಗ ಮತ್ತೆ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೆರಡು ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು (Bangalore Rains) ಭಾಗದಲ್ಲಿ ಇಂದಿನಿಂದ 2 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಮಳೆ ಮುಂದುವರೆಯಲಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Puducherry Rain: ಪುದುಚೆರಿಯಲ್ಲಿ ಭಾರೀ ಮಳೆ; ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಣೆ

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 2 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ 2 ದಿನ ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಅಸ್ಸಾಂ ಸುತ್ತಲೂ ಮಂಜು ಕವಿಯುವ ಸಾಧ್ಯತೆಯಿದೆ. ಇಂದಿನಿಂದ 2 ದಿನ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಬೀಳುವ ಸಾಧ್ಯತೆಯಿದೆ. ನವೆಂಬರ್ 6ರಂದು ಉತ್ತರಾಖಂಡದಲ್ಲಿ ಹಿಮಪಾತವಾಗಲಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನವೆಂಬರ್ 6ರವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಮತ್ತು ಕರೂರ್ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ